23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯು ಮಾ.27ರಂದು ನಡೆಯಿತು.
ಸಭೆಯಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಾಸ್ತಾವಿಕ ಮಾತನಾಡಿ ಲೋಕಸಭಾ ಚುನಾವಣೆ ಪೂರ್ವಭಾವಿ ಬಗ್ಗೆ ಚುನಾವಣೆ ಪ್ರಚಾರ ನಡೆಸುವ ಬಗ್ಗೆ ವಿವರಿಸಿದರು.
ಈ ವೇಳೆ ಶಾಸಕ ಹರೀಶ್ ಪೂಂಜ ಮಾತನಾಡಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ದಕ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅತೀ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಲು ಕರೆ ಕೊಟ್ಟರು ಮತ್ತು ಮಾ. 30 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಲಿರುವ ಬೆಳ್ತಂಗಡಿ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ನಡೆಸುವ ಬಗ್ಗೆ ತಿಳಿಸಿ ಕಾರ್ಯಕರ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆಕೊಟ್ಟರು.

ಬಿಜೆಪಿ ದಕ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು ಮತ್ತು ವಸಂತಿ ಮಚ್ಚಿನ ಉಪಸ್ಥಿತರಿದ್ದರು ಹಾಗೂ ಮಂಡಲ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!