23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಹೇರಾಜೆ ಶೇಖರ‌ ಬಂಗೇರ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ಘಟನೆಯ ವಿವರ: ಶೇಖರ್ ಬಂಗೇರರವರು ‌ಇಂದು ರಾತ್ರಿ ಸಮಡೈನ್ ಹೋಟೇಲ್ ನಿಂದ ಪುಡ್ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಸ್ಕೂಟಿ ಬಂದು ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಳೆಯಲ್ಪಟ್ಟು ಶೇಖರ ಬಂಗೇರ ಗಂಭೀರ ಗಾಯಗೊಂಡರು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ದಾರಿ ಮಧ್ಯೆ ಅವರು ಮೃತಪಟ್ಟರು.

ಸ್ಕೂಟಿ ಸವಾರರು ಕೂಡಾ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶೇಖರ ಬಂಗೇರ ಅವರು ನಿವೃತ್ತ ವಿಜಯಾ ಬ್ಯಾಂಕ್ ಮೆನೇಜರ್ ಆಗಿದ್ದು,ಲಾಯಿಲ ರಾಘವೇಂದ್ರ ಸ್ವಾಮಿ ಪ್ರತಿಷ್ಠಾನದ ಮಾಜಿ ಅಧ್ಯಕ್ಷರಾಗಿ, ಹಲವಾರು ಸಂಘ- ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇವರು ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆಯವರ ಸಹೋದರ.

Related posts

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya
error: Content is protected !!