September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸದ್ರಿಯವರ ಸಹೋದರ ರಮೇಶ್ ಎಂಬವರು ನೀಡಿದ ದೂರಿನಲ್ಲಿ ಸುಮಾರು 6 ವರ್ಷಗಳಿಂದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿರುವ. ಲಕ್ಷ್ಮೀನಾರಾಯಣ ಅವರು ಮಾ. 27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಅಮ್ಟಾಡಿ ಪಂಚಾಯತ್‌ ನಲ್ಲಿ ವಿಚಾರಿಸಿದಾಗ, ಸದ್ರಿಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿರುತ್ತಾರೆ.

ಆದರೆ ಲಕ್ಷ್ಮೀನಾರಾಯಣ ಕೆ ರವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ23/2024ರಂತೆ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya
error: Content is protected !!