ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವವು ಮಾ.28ರಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.
ರಾತ್ರಿ ಪೂಜೆ, ಶ್ರೀ ಭೂತ ಬಲಿ ಉತ್ಸವವು ವಿಜೃಂಭಣೆಯಿಂದ ಜರುಗಿತು.
ಸಾಂಸ್ಕೃತಿಕ ಕಾರ್ಯಕ್ರಮಗಳಾದ ಭರತನಾಟ್ಯ ಕಾರ್ಯಕ್ರಮ, ಸಂಗೀತ ರಸ ಸಂಜೆ ಕಾರ್ಯಕ್ರಮವು ಜರುಗಿತು. ನಂತರ ಬಿಸಿರೋಡ್ ಓಂ ಶ್ರೀ ಕಲಾವಿದೆರ್ ರವರಿಂದ ತುಳು ಸಾಂಸಾರಿಕ ಹಾಸ್ಯಮಯ ನಾಟಕ ಅಂದ್ಂಡ ಅಂದ್ ಪನ್ಲೆ ಎಂಬ ನಾಟಕವು ಜರುಗಿತು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷ ಬಿ.ಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧಿಕಾರಿ ವಾಸುದೇವ ರಾವ್ ಕಕ್ಕೆನೇಜಿ, ಬೈಲುವಾರು ಸಮಿತಿಯ ರವೀಂದ್ರ ಪೂಜಾರಿ, ಆನಂದ ಗೌಡ , ಲಕ್ಷ್ಮಣ ಪೂಜಾರಿ, ಗೋಪಾಲ ಗೌಡ, ದೀಕ್ಷಿತ್ ಹೆಚ್, ಸಂಜೀವ ಗೌಡ, ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.