30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು .

ಮುಂಬೈನ ಜಾನ್ ಡಿ ಸಿಲ್ವ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಸಮುದ್ರದಲ್ಲಿ ಕಚ್ಚಾ ತೈಲವನ್ನು ತೆಗೆಯುವ ಪ್ರಕ್ರಿಯೆ ಹಾಗೂ ಸದರಿ ಉದ್ಯಮದಲ್ಲಿ ದೊರೆಯುವ ವಿವಿಧ ಉದ್ಯೋಗ ಅವಕಾಶಗಳ ಬಗ್ಗೆ ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಡಾ. ಸುಬ್ರಹ್ಮಣ್ಯ ಕೆ ಇವರು ವಹಿಸಿದ್ದರು.

ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಕೆ ಹಾಗೂ ಕಾರ್ಯಕ್ರಮ ಆಯೋಜಕರಾದ ಪ್ರೊಫೆಸರ್ ಸುರೇಶ್ ವಿ ಹಾಗೂ ಆಂತರಿಕ ಗುಣಮಟ್ಟ ಭರವಸ ಕೋಶದ ಸಂಯೋಜಕರಾದ ಡಾ. ಕುಶಲಪ್ಪ ಹಾಗೂ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಏನ್ ಉಪಸ್ಥಿತರಿದ್ದರು.

ಪ್ರೊಫೆಸರ್ ನವೀನ್ ಹಾಗೂ ಪ್ರೊಫೆಸರ್ ರಾಜೇಶ್ವರಿ ಎಚ್ಎಸ್ ಕಾರ್ಯಕ್ರಮವನ್ನು ಸಂಯೋಜಿಸಿದರು. ಕುಮಾರಿ ಸಂಜನಾ ಸ್ವಾಗತಿಸಿ, ವಿಜಯಲಕ್ಷ್ಮಿ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು. ಅಬಿಷ ವಂದಿಸಿದರು. ಅಪೇಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು

Related posts

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya
error: Content is protected !!