April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವವು ಮಾ.28ರಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.

ರಾತ್ರಿ ಪೂಜೆ, ಶ್ರೀ ಭೂತ ಬಲಿ ಉತ್ಸವವು ವಿಜೃಂಭಣೆಯಿಂದ ಜರುಗಿತು.

ಸಾಂಸ್ಕೃತಿಕ ಕಾರ್ಯಕ್ರಮಗಳಾದ ಭರತನಾಟ್ಯ ಕಾರ್ಯಕ್ರಮ, ಸಂಗೀತ ರಸ ಸಂಜೆ ಕಾರ್ಯಕ್ರಮವು ಜರುಗಿತು. ನಂತರ ಬಿಸಿರೋಡ್ ಓಂ ಶ್ರೀ ಕಲಾವಿದೆರ್ ರವರಿಂದ ತುಳು ಸಾಂಸಾರಿಕ ಹಾಸ್ಯಮಯ ನಾಟಕ ಅಂದ್ಂಡ ಅಂದ್ ಪನ್ಲೆ ಎಂಬ ನಾಟಕವು ಜರುಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷ ಬಿ.ಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧಿಕಾರಿ ವಾಸುದೇವ ರಾವ್ ಕಕ್ಕೆನೇಜಿ, ಬೈಲುವಾರು ಸಮಿತಿಯ ರವೀಂದ್ರ ಪೂಜಾರಿ, ಆನಂದ ಗೌಡ , ಲಕ್ಷ್ಮಣ ಪೂಜಾರಿ, ಗೋಪಾಲ ಗೌಡ, ದೀಕ್ಷಿತ್ ಹೆಚ್, ಸಂಜೀವ ಗೌಡ, ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ