24.8 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಶಿಕ್ಷಣ ತಜ್ಞರಾಗಿದ್ದ ಡಾ . ಬಿ. ಯಶೋವರ್ಮ ಅವರ ಸ್ಮರಣಾರ್ಥ ಮಾ. 30 ರ ಶನಿವಾರ ದಂದು “ಯಶೋವನ”ಲೋಕಾರ್ಪಣೆಗೊಂಡಿತು
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಎಸ್.ಡಿ.ಎಂ ಕಾಲೇಜಿನ ಆರ್ಬೋರೇಟಂ-ಅಂದರೆ ಸಸ್ಕೋಧ್ಯಾನವನ್ನು “ಯಶೋವನ” ಎಂದು ಮರುನಾಮಕರಣ
ಗೊಳಿಸಲಾಗಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು “ಯಶೋವನ” ಅನಾವರಣಗೊಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ
ಡಾ. ಡಿ. ವೀರೇಂದ್ರ ಹೆಗ್ಗಡೆಯವರು
ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾಯ೯ಕ್ರಮದಲ್ಲಿ ಡಾ. ಹೇಮಾವತಿ ವೀ.ಹೆಗ್ಗಡೆ, ಡಿ.ಹಷೇ೯ಂದ್ರ ಕುಮಾರ್, ಮಂಗಳೂರು ವಿ.ವಿ.ಯ ಪಿ.ಎಲ್ ಧಮ೯, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾಯ೯ದಶಿ೯ ಡಾ. ಸತೀಶ್ಚಂದ್ರ ಸುಯ೯ಗುತ್ತು, ಸೋನಿಯಾ ಯಶೋವರ್ಮ, ಪೂರಣ್ ವಮ೯ ಮೊದಲಾದವರು ಉಪಸ್ಥಿತರಿದ್ದರು.
ಉಜಿರೆ ಕಾಲೇಜು ಪ್ರಾಚಾರ್ಯ ಡಾ.ಕುಮಾರ ಹೆಗ್ಡೆ ಸ್ವಾಗತಿಸಿದರು, ಡಾ.ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.


ಡಾ.ಹೆಗ್ಗಡೆಯವರ ಆಶಯದಂತೆ “ಯಶೋವನ”ದಲ್ಲಿ ಬಾಲಿಯ ಲಿಂಪುಯಂಗ್ ದೇವಾಲಯದ ಆವರಣದಲ್ಲಿರುವ ವಿಶ್ವ ವಿಖ್ಯಾತ “ಗೇಟ್ ಆಫ್ ಹೆವನ್” ಅಂದರೆ “ಸ್ವರ್ಗದ ದ್ವಾರ”ದ ಮಾದರಿಯ ಗೋಪುರವನ್ನು ನಿರ್ಮಿಸಲಾಗಿದೆ. ಆ ಮೂಲಕ ಸ್ವರ್ಗಸದೃಶ ಪ್ರಕೃತಿಯ ಲೋಕಕ್ಕೆ ಎಲ್ಲರಿಗೂ ಸ್ವಾಗತ ಕೋರುವಂತೆ ಮಾಡಲಾಗಿದೆ.
ಏನಿದು ಯಶೋವನ:
1999 ರಲ್ಲಿ ಡಾ. ಬಿ. ಯಶೋವರ್ಮ ಅವರ ಮುತುವರ್ಜಿಯಿಂದ ಆರಂಭವಾದ ಅಪರೂಪದ ಸಸ್ಯಸೌರಭಗಳನ್ನು ರಕ್ಷಿಸುವ ಸಸ್ಕೋಧ್ಯಾನವೇ ಈ ಯಶೋವನ. ಪಶ್ಚಿಮಘಟ್ಟಗಳ ಅಪರೂಪದ ಸಸ್ಯ ಸಂಕುಲಗಳನ್ನು ಸಂರಕ್ಷಿಸುವ ಮತ್ತು ಅವುಗಳ ತಳಿಗಳನ್ನು ದಾಖಲಿಸುವ ಸಲುವಾಗಿ ಉಜಿರೆಯ ಸಿದ್ಧವನ ಸಮೀಪದಲ್ಲಿ ಎಂಟು ಎಕರೆ ಜಾಗದಲ್ಲಿ ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಆರ್ಬೋರೇಟಂ (ಸಸ್ಕೋದ್ಯಾನ) ಹೆಸರಿನಲ್ಲಿ ಈ ಸಂರಕ್ಷಣಾ ವನವನ್ನು ಸ್ಥಾಪಿಸಿತ್ತು.

Related posts

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya
error: Content is protected !!