24.4 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿ

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಶಿಕ್ಷಣ ತಜ್ಞರಾಗಿದ್ದ ಡಾ . ಬಿ. ಯಶೋವರ್ಮ ಅವರ ಸ್ಮರಣಾರ್ಥ ಮಾ. 30 ರ ಶನಿವಾರ ದಂದು ಯಶೋವನ”ಲೋಕಾರ್ಪಣೆಗೊಂಡಿತು
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಎಸ್.ಡಿ.ಎಂ ಕಾಲೇಜಿನ ಆರ್ಬೋರೇಟಂ-ಅಂದರೆ ಸಸ್ಕೋಧ್ಯಾನವನ್ನು “ಯಶೋವನ” ಎಂದು ಮರುನಾಮಕರಣಗೊಳಿಸಲಾಗಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು “ಯಶೋವನ” ಅನಾವರಣಗೊಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾಯ೯ಕ್ರಮದಲ್ಲಿ ಡಾ. ಹೇಮಾವತಿ ವೀ.ಹೆಗ್ಗಡೆ, ಡಿ.ಹಷೇ೯ಂದ್ರ ಕುಮಾರ್, ಮಂಗಳೂರು ವಿ.ವಿ.ಯ ಪಿ.ಎಲ್ ಧಮ೯, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾಯ೯ದಶಿ೯ ಡಾ. ಸತೀಶ್ಚಂದ್ರ ಸುಯ೯ಗುತ್ತು, ಸೋನಿಯಾ ಯಶೋವರ್ಮ, ಪೂರಣ್ ವಮ೯ ಮೊದಲಾದವರು ಉಪಸ್ಥಿತರಿದ್ದರು.

ಉಜಿರೆ ಕಾಲೇಜು ಪ್ರಾಚಾರ್ಯ ಡಾ.ಕುಮಾರ ಹೆಗ್ಡೆ ಸ್ವಾಗತಿಸಿದರು, ಡಾ.ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.
ಡಾ.ಹೆಗ್ಗಡೆಯವರ ಆಶಯದಂತೆ “ಯಶೋವನ”ದಲ್ಲಿ ಬಾಲಿಯ ಲಿಂಪುಯಂಗ್ ದೇವಾಲಯದ ಆವರಣದಲ್ಲಿರುವ ವಿಶ್ವ ವಿಖ್ಯಾತ “ಗೇಟ್ ಆಫ್ ಹೆವನ್” ಅಂದರೆ “ಸ್ವರ್ಗದ ದ್ವಾರ”ದ ಮಾದರಿಯ ಗೋಪುರವನ್ನು ನಿರ್ಮಿಸಲಾಗಿದೆ. ಆ ಮೂಲಕ ಸ್ವರ್ಗಸದೃಶ ಪ್ರಕೃತಿಯ ಲೋಕಕ್ಕೆ ಎಲ್ಲರಿಗೂ ಸ್ವಾಗತ ಕೋರುವಂತೆ ಮಾಡಲಾಗಿದೆ.

ಏನಿದು ಯಶೋವನ:
1999 ರಲ್ಲಿ ಡಾ. ಬಿ. ಯಶೋವರ್ಮ ಅವರ ಮುತುವರ್ಜಿಯಿಂದ ಆರಂಭವಾದ ಅಪರೂಪದ ಸಸ್ಯಸೌರಭಗಳನ್ನು ರಕ್ಷಿಸುವ ಸಸ್ಕೋಧ್ಯಾನವೇ ಈ ಯಶೋವನ. ಪಶ್ಚಿಮಘಟ್ಟಗಳ ಅಪರೂಪದ ಸಸ್ಯ ಸಂಕುಲಗಳನ್ನು ಸಂರಕ್ಷಿಸುವ ಮತ್ತು ಅವುಗಳ ತಳಿಗಳನ್ನು ದಾಖಲಿಸುವ ಸಲುವಾಗಿ ಉಜಿರೆಯ ಸಿದ್ಧವನ ಸಮೀಪದಲ್ಲಿ ಎಂಟು ಎಕರೆ ಜಾಗದಲ್ಲಿ ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಆರ್ಬೋರೇಟಂ (ಸಸ್ಕೋದ್ಯಾನ) ಹೆಸರಿನಲ್ಲಿ ಈ ಸಂರಕ್ಷಣಾ ವನವನ್ನು ಸ್ಥಾಪಿಸಿತ್ತು.

Related posts

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!