27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

ಬೆಳ್ತಂಗಡಿ: ಧಮ೯ಸ್ಥಳದಿಂದ ಪಟ್ರಮೆಗೆ ಹೋಗುವ ದಾರಿಯಲ್ಲಿ ಸಿಗುವ ಪಟ್ರಮೆ ಹೊಳೆಯಲ್ಲಿ ಶವವೊಂದು ಪತ್ತೆಯಾಗಿದ್ದು, ಇದು ಇತ್ತೀಚೆಗೆ ನಾಪತ್ತೆಯಾದ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿಲಕ್ಷ್ಮೀನಾರಾಯಣ ಅವರದೆಂದು ಗುರುತಿಸಲಾಗಿದೆ.

ಮಡಂತ್ಯಾರು ಮಾಲಾಡಿ ಗ್ರಾಮದ, ವಿದ್ಯಾ ನಗರ ನಿವಾಸಿ, ಸುಮಾರು 6 ವರ್ಷಗಳಿಂದ ಬಂಟ್ವಾಳ ತಾಲೂಕು ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ಮಾ.27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಅವರು ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಮನೆಯವರು ಅಮ್ಟಾಡಿ ಪಂಚಾಯತ್‌ ನಲ್ಲಿ ವಿಚಾರಿಸಿದಾಗ, ಅಲ್ಲಿನ ಸಿಬ್ಬಂದಿಗಳು ಕಾಯ೯ದಶಿ೯ಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿದ್ದರು. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಲಿಲ್ಲ.ಲಕ್ಷ್ಮೀನಾರಾಯಣ ರವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ಅವರ ಸಹೋದರ ರಮೇಶ್ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ23/2024, ಪ್ರಕರಣ ದಾಖಲಾಗಿತ್ತು .

ಮಾ.31 ರಂದು ನಾಪತ್ತೆಯಾಗಿ ನಾಲ್ಕು ದಿನಗಳ ಬಳಿಕ ಅವರ ಮೃತ ಪಟ್ರಮೆ ಹೊಳೆಯಲ್ಲಿ ಪತ್ತೆಯಾಗಿದೆ. ನಾಪತ್ತೆಯಾದ ಮರುದಿನ ಪಟ್ರಮೆ ಸೇತುವೆ ಬಳಿ ಅವರ ಬೈಕ್ ದೊರಕಿದ್ದು, ಇದರ ಆಧಾರದಲ್ಲಿ ಶವ ನಾಪತ್ತೆ ಆಗಿರುವ ಲಕ್ಷ್ಮೀನಾರಾಯಣ ಅವರದೆಂದು ಗುರುತಿಸಲಾಗಿದೆ. ಬೈಕ್ ದೊರೆತ ಬಳಿಕ ಇಲ್ಲಿ ಹುಡುಕಾಟ ನಡೆಯುತ್ತಿತ್ತು. ಲಕ್ಷ್ಮೀನಾರಾಯಣ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಕದು ಸಂಶಯಿಸಲಾಗಿದೆ.

ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಶವವನ್ನು ಮೇಲೆತ್ತಿ ದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya
error: Content is protected !!