ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

ಬೆಳ್ತಂಗಡಿ : ಕಳಿಯ ಗ್ರಾಮ ದ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ ಮಾ.30 ರಂದು ಭಜನಾ ಮಂಡಳಿ ವಠಾರದಲ್ಲಿ ಜರುಗಿತು.
ಪ್ರಗತಿಪರ ಕೃಷಿಕ ಚಂದ್ರಶೇಖರ ಗೌಡ ಪೆರಾಜೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.


ಗೇರುಕಟ್ಟೆ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ತಂಡದ ಸದಸ್ಯರಿಂದ ಭಜನೆ ಮತ್ತು ಮಹಾ ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.


ತಾಲೂಕು ಭಜನಾ ಪರಿಷತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯನ್ ಕೊಯ್ಯೂರು, ವಿವಿಧ ಸಂಘದ ಪದಾಧಿಕಾರಿಗಳು, ಭಜನಾ ಮಂಡಳಿ ಸದಸ್ಯರು ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು..
ಭಜನಾ ಮಂಡಳಿ ಗೌರವಾಧ್ಯಕ್ಷ ಚೆನ್ನಪ್ಪ ಗೌಡ, ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ಲೋಹಿತಾಶ್ವ ಗೌಡ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya
error: Content is protected !!