24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಂಘದ ಮಹಾಸಭೆ ಬೆಳ್ತಂಗಡಿಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್‌ರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಯಲ್ಲಿ ಸಂಘದ ಮುಂದಿನ ಅವಧಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಂಘದ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಸರ್ವಾನುಮತದಿಂದ ಆಯ್ಕೆಯಾದರು.

ನೂತನ ಆಡಳಿತ ಮಂಡಳಿಗೆ ಇತರ ಪದಾಧಿಕಾರಿಗಳನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya
error: Content is protected !!