September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಂಘದ ಮಹಾಸಭೆ ಬೆಳ್ತಂಗಡಿಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್‌ರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಯಲ್ಲಿ ಸಂಘದ ಮುಂದಿನ ಅವಧಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಂಘದ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಸರ್ವಾನುಮತದಿಂದ ಆಯ್ಕೆಯಾದರು.

ನೂತನ ಆಡಳಿತ ಮಂಡಳಿಗೆ ಇತರ ಪದಾಧಿಕಾರಿಗಳನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya
error: Content is protected !!