September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಬೆಳ್ತಂಗಡಿ: ಕೃಷಿಕ್ ಸರ್ವೋದಯ ಪೌಂಡೇಶನ್ (ರಿ) ಬೆಂಗಳೂರು, ಹಾಸನ ಶಾಖಾ ವತಿಯಿಂದ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ತಲಾ ಹತ್ತು ಸಾವಿರ ರೂಪಾಯಿಗಳಂತೆ ಒಟ್ಟು ಐದು ಲಕ್ಷ ಹಾಗೂ ಒರ್ವ ವಿದ್ಯಾರ್ಥಿನಿಗೆ ಇಪ್ಪತ್ತು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷರಾದ ಎಚ್ ಪದ್ಮ ಗೌಡ, ಅಧ್ಯಕ್ಷರಾದ ಕುಶಾಲಪ್ಪ ಗೌಡ, ಕಾರ್ಯದರ್ಶಿಗಳಾದ ಗಣೇಶ್ ಗೌಡ ಹಾಗೂ ಕೋಶಾಧಿಕಾರಿಗಳಾದ ಯುವರಾಜ್ ಅನಾರ್ ಇವರುಗಳು ವಿದ್ಯಾರ್ಥಿಗಳಿಗೆ ಚೆಕ್ ವಿತರಣೆ ಮಾಡಿದರು. ಪ್ರತಿ ವರ್ಷ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಬಡ ಕೃಷಿಕ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಪ್ರಸಾದ್ ಕುಮಾರ್ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya
error: Content is protected !!