25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ.) ಬೆಳ್ತಂಗಡಿ ತಾಲೂಕು ಇವರ ವತಿಯಿಂದ, ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ ಜರಗಿತು.

ಭಾರತೀಯ ಪರಂಪರೆಯ ಶ್ರೇಷ್ಠತೆ ತಿಳಿಯಲು ನಮ್ಮ ಪುರಾಣ ಹಾಗೂ ಇತರ ಕಾವ್ಯ ಭಾಗಗಳಲ್ಲಿ ಬರುವ ಕಥೆಗಳನ್ನು ಓದಬೇಕು. ಅಲ್ಲಿನ ಕಥೆಗಳೆಲ್ಲ ಶ್ರೇಷ್ಠ ಜೀವನ ಮೌಲ್ಯಗಳನ್ನು ಸಾರುವ ಕಥೆಗಳಾಗಿದ್ದು, ನಮ್ಮ ಬದುಕಿಗೆ ದಾರಿದೀಪಗಳಾಗಿವೆ ಎಂದು
ಉಪನ್ಯಾಸಕರಾಗಿ ಆಗಮಿಸಿದ ಉಜಿರೆ ಶ್ರೀ ಧ ಮ ಕಾಲೇಜಿನ ಉಪನ್ಯಾಸಕರಾದ ಡಾ. ಶ್ರೀಧರ ಭಟ್ ರವರು ತಿಳಿಸಿದರು. ಜೊತೆಗೆ; ಕಥೆಗಳು ನಮಗೆ ಬದುಕಿಗೆ ಜೀವನ ಶಿಕ್ಷಣವನ್ನೂ ನೀಡುವವುಗಳಾಗಿವೆ ಎಂದೂ ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊ. ಗಣಪತಿ ಭಟ್ ಕುಳಮರ್ವರವರು ವಹಿಸಿದ್ದರು.

ವೇದಿಕೆಯಲ್ಲಿ ಅಭಾಸಾಪದ ಜತೆ ಕಾರ್ಯದರ್ಶಿಗಳಾದ ಶ್ರೀಮತಿ ವಿನುತಾ ಆರ್ ಗೌಡರವರು ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಕೃಷ್ಣಾನಂದ, ಶ್ರೀಮತಿ ರಾಜಶ್ರೀ, ಶ್ರೀಮತಿ ಕೋಕಿಲ, ಶ್ರೀಮತಿ ಚಿತ್ರಾರವರು ಸಭೆಯಲ್ಲಿ ಹಾಜರಿದ್ದರು.

ಕಾರ್ಯಕ್ರಮದ ಸಂಯೋಜಕರಾದ ಸುಮನ್ ಯು ಎಸ್ ರವರು ಸ್ವಾಗತಿಸಿ, ವಿದ್ಯಾರ್ಥಿನಿ ಕು. ರಕ್ಷಾ ಎನ್ ವಂದಿಸಿದರು, ಕು. ಇಂದುಮತಿ ಕಾರ್ಯಕ್ರಮ ನಿರೂಪಿಸಿದರು.

Related posts

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya
error: Content is protected !!