September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

ಬೆಳ್ತಂಗಡಿ : ಚುನಾವಣೆಯ ಪ್ರಕ್ರಿಯೆಗಳು ತ್ವರಿತವಾಗಿ ನಡೆಯುತ್ತಿದ್ದಂತೆ ಚುನಾವಣೆಗಾಗಿ ನಿರ್ಮಿಸಲಾದ ವಿಶೇಷ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಂಡಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಪಾಲಿಸುವ ಚೆಕ್ ಪೋಸ್ಟ್ ಗಳನ್ನು ಈಗಾಗಲೇ ತೆರೆಯಲಾಗಿದೆ. ದಿನದ 24 ಗಂಟೆಯೂ ಇವುಗಳ ಮೂಲಕ ಸಂಚರಿಸುವ ವಾಹನಗಳನ್ನು ಪರಿಶೀಲಿಸಿ ಮುಂದೆ ಬಿಡಲಾಗುತ್ತದೆ.


ಪ್ರತಿವಾಹನವನ್ನು ನಿಲ್ಲಿಸಿ ಅದರಲ್ಲಿ ಸಾಗಾಟ ಮಾಡುವ ವಸ್ತುಗಳನ್ನು ಪರಿಶೀಲಿಸಿದ ಬಳಿಕವಷ್ಟೇ ಸಂಚಾರಕ್ಕೆ ಅನುವು ಮಾಡಿಕೊಳ್ಳಲಾಗುತ್ತದೆ. ಇಲ್ಲಿ ಓರ್ವ ಸ್ಟಾಟಿಕ್ ಸರ್ವೆ ಲೈನ್ ಲೀಡರ್, ಅಬಕಾರಿ ಪೊಲೀಸ್, ಟ್ರಾಫಿಕ್ ಪೊಲೀಸ್, ಸ್ಥಳೀಯ ಠಾಣೆಯ ಪೊಲೀಸ್,ವಿಡಿಯೋ ಗ್ರಾಫರ್ ಸೇರಿದಂತೆ ಮೂರು ಪಾಳಿಗಳಲ್ಲಿ ಬೇರೆ ಬೇರೆ ತಂಡಗಳು ಕಾರ್ಯನಿರ್ವಹಿಸುತ್ತವೆ. ಇದು ಚುನಾವಣಾ ನೀತಿ ಸಂಹಿತೆ ಕೊನೆಗೊಳ್ಳುವವರೆಗೂ ಮುಂದುವರಿಯಲಿದೆ.


ಕಾರ್ಯನಿರ್ವಹಿಸದ ಗೇಟ್
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಗೇಟ್ ಇದ್ದರು ಅದು ಬಳಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಈ ಕಾರಣದಿಂದ ಇಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ವಾಹನ ತಪಾಸಣೆ ನಡೆಸಲಾಗುತ್ತದೆ. ಪರಿಸರದಲ್ಲಿ ಹೆದ್ದಾರಿ ಅಗಲೀಕರಣ ಕಾಮಗಾರಿಯು ನಡೆಯುತ್ತಿದ್ದು ವಿಪರೀತ ಧೂಳಿನ ವಾತಾವರಣವು ಕಂಡು ಬರುತ್ತದೆ. ಇಲ್ಲಿ ರಸ್ತೆಯು ಇಕ್ಕಟ್ಟಾಗಿದ್ದು ವಾಹನ ಸಂಚಾರಕ್ಕೂ ಸಮಸ್ಯೆ ಇದೆ. ತಪಾಸಣೆ ಸಂದರ್ಭ ವಾಹನಗಳ ಸರತಿಯು ಹೆಚ್ಚುತ್ತಿದೆ.


ಪಂಚಾಯಿತಿ ಕೆಲಸ ಕುಂಠಿತ
ಚೆಕ್ ಪೋಸ್ಟ್ ಗಳಲ್ಲಿ ಕೆಲವು ಪಂಚಾಯಿತಿ ಪಿಡಿಒ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು ಇವರು ನೀತಿ ಸಂಹಿತೆ ಕೊನೆಗೊಳ್ಳುವವರೆಗೂ ಕಾರ್ಯನಿರ್ವಹಿಸಬೇಕಾಗಿದೆ ದಿನದ 8 ಗಂಟೆ ಇವರಿಗೆ ಕಡ್ಡಾಯ ಚೆಕ್ ಪೋಸ್ಟ್ ನಿರ್ವಹಣೆ ಜವಾಬ್ದಾರಿ ಇರುತ್ತದೆ. ಈ ಕಾರಣದಿಂದ ಪಂಚಾಯಿತಿಗಳಿಗೆ ಹೋಗಲು ಸಮಯಾವಕಾಶ ಸಿಗುವುದಿಲ್ಲ ಇದರಿಂದ ಯಾವ ಪಂಚಾಯಿತಿಗಳ ಪಿಡಿಒಗಳಿಗೆ ಹಾಗೂ ಸಿಬ್ಬಂದಿಗಳಿಗೆ ಚೆಕ್ ಪೋಸ್ಟ್ ಜವಾಬ್ದಾರಿ ನೀಡಲಾಗಿದೆಯೇ ಅಂತಹ ಪಂಚಾಯಿತಿಗಳ ಗ್ರಾಮಸ್ಥರ ಕೆಲಸಗಳು ಸಾಗುತ್ತಿಲ್ಲ ಎಂಬ ದೂರು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ನಾಯಕತ್ವ ತರಬೇತಿ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!