24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

ಬಂದಾರು: ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾಮಹೋತ್ಸವದ ಅಂಗವಾಗಿ ಎ.01ರಂದು ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ದಿ, ಯಾಗಮಂಡಲಾರಾಧನೆ, ನಾಂದಿಮಂಗಲ, ವಾಸ್ತುಪೂಜೆ, ನವಗ್ರಹಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ರಾತ್ರಿ ಗರ್ಭಾವತರಣ ವಿಧಿ, 108 ಕಲಶ ಅಭಿಷೇಕ ನಡೆಯಿತು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕರ ದಿವ್ಯಉಪಸ್ಥಿತಿ ಮತ್ತು ಆಶೀರ್ವಾದಗಳೊಂದಿಗೆ ಕಾರ್ಯಕ್ರಮಗಳು ನಡೆದವು.

ಬೆಳಾಲು ಉದಿತಕುಮಾರ್ ಮತ್ತು ಮಕ್ಕಳು ಹಾಗೂ ಕುಟುಂಬಸ್ಥರು ಸೇವಾಕರ್ತರುಗಳಾಗಿ ಸಹಕರಿಸಿದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಪ್ರತಿಷ್ಠಾಚಾರ್ಯ ಕೆ. ಜಯರಾಜ ಇಂದ್ರ ನೇತೃತ್ವದಲ್ಲಿ ಸ್ಥಳ ಪುರೋಹಿತ ಜೀವಿತ್ ಇಂದ್ರ ಹಾಗೂ ಪುರೋಹಿತವರ್ಗದವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!