September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ 2023-24ನೇ ಶೈಕ್ಷಣಿಕ ವರ್ಷದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಎ.1 ರಂದು ಹಮ್ಮಿಕೊಳ್ಳಲಾಗಿತ್ತು.


ಬೇಸಿಗೆ ಶಿಬಿರವನ್ನು ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಟಿಕ್ಕ ಸಾಹೇಬರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ನಮ್ಮ ಶಾಲೆಯಲ್ಲಿ ಬೇಸಿಗೆ ಶಿಬಿರವನ್ನು ಆಯೋಜನೆ ಮಾಡಿರುವಂಥದ್ದು ತುಂಬಾನೇ ಉತ್ತಮವಾದ ಬೆಳವಣಿಗೆಯಾಗಿದೆ ಇಂತಹ ಬೇಸಿಗೆ ಶಿಬಿರದಲ್ಲಿ ಶಾಲೆಯ ಎಲ್ಲ ಮಕ್ಕಳು ಉತ್ತಮವಾದ ರೀತಿಯಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ವಹಿಸಿ, ಮಾತನಾಡಿ ಇತ್ತೀಚಿನ ದಿನಗಳಲ್ಲಿ ಇಂತಹ ಬೇಸಿಗೆ ಶಿಬಿರ ಬಹಳಷ್ಟು ಮಹತ್ವವನ್ನು ಪಡೆದುಕೊಂಡಿದೆ. ಬೇಸಿಗೆ ಶಿಬಿರದಲ್ಲಿ ಕಲಿತಂತಹ ವಿಚಾರಗಳನ್ನು ಮುಂದಿನ ದಿನಗಳಲ್ಲಿ ತಾವು ಅಳವಡಿಸಿಕೊಂಡು ಮುಂದುವರಿಯಬೇಕು ಎಂದು ತಿಳಿಸಿದರು.


ಮೊದಲ ದಿನದ ಬೇಸಿಗೆ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಸೆಕೆಂಡರಿ ಶಾಲೆಯ ಚಿತ್ರಕಲಾ ಶಿಕ್ಷಕ ಶ್ರೀರಾಮ್ ಆಗಮಿಸಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ನಿಶಾಂತ್ ಕುಮಾರ್ ಸ್ವಾಗತಿಸಿ, ಶಿಕ್ಷಕಿಯಾದ ಶ್ರೀಮತಿ ವೇದಾವತಿಯವರು ಧನ್ಯವಾದವಿತ್ತರು. ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಕಾರ್ಯಕ್ರಮ ನಿರೂಪಿಸಿದರು.


ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿದರು. ಮೊದಲ ದಿನದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಕಾಗದದಿಂದ ತಯಾರಿಸಬಹುದಾದ ಹಲವಾರು ಮಾದರಿಗಳನ್ನು ಶಿಕ್ಷಕ ಶ್ರೀರಾಮ್ ಅವರಿಂದ ತಿಳಿದುಕೊಂಡರು.

Related posts

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಕನ್ಯಾಡಿ: ಕೈಲಾಜೆಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya
error: Content is protected !!