29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಏಕಗವಾಕ್ಷಿ ಪದ್ಧತಿ ತಂಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಏ.2ರಂದು ಆತ್ಮಹತ್ಯೆಗೆ ಯತ್ನಿಸಿದ್ದು, ಜಿಲ್ಲಾಸ್ಪತ್ರೆ ವೆನ್‌ಲಾಕ್‌ಗೆ ದಾಖಲಿಸಲಾಗಿದೆ.

ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. 2019ರಿಂದ ಬೆಳ್ತಂಗಡಿಯ ಕಡಿರುದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ಇಂದು ಆತ್ಮಹತ್ಯೆಗೆ ಯತ್ನಿಸಿದ, ಇವರನ್ನು ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ನಿಗಾವಣಿಗಾಗಿ ಇವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.

ಇವರು ಗುರುವಾಯನಕೆರೆ ಸಮೀಪದ ಪಣೆಜಾಲು ನಿವಾಸಿಯಾಗಿದ್ದಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಚಿಕಿತ್ಸೆಗೆ ನೆರವಾಗಿದ್ದಾರೆ.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಶ್ರೀಧರ ಹೆಗಡೆ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಅವರಲ್ಲಿ ಆತ್ಮಸ್ಥೈರ್ಯ ತುಂಬಿದರು.

Related posts

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya
error: Content is protected !!