ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶವು ಎ. 2 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ವಹಿಸಿದ್ದರು.
ಸಮಾವೇಶದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ತಾಲೂಕು ಪ್ರಭಾರಿ ಹರಿಕೃಷ್ಣ ಬಂಟ್ವಾಳ, ತಾಲೂಕು ಸಂಚಾಲಕ ಕುಶಾಲಪ್ಪ ಗೌಡ, ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೆ, ಜಿಲ್ಲಾ ಕಾರ್ಯದರ್ಶಿ ಯತೀಶ್ ಆಳ್ವ, ತಿಲಕ್‌ರಾಜ್ ಕೃಷ್ಣಾಪುರ, ಜಿಲ್ಲಾ ಪ್ರವಾಸಿ ಪ್ರಮುಖ್ ದೇವದಾಸ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ. ಎಸ್, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ತಾಲೂಕು ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕೊಟ್ಯಾಡಿ, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣಾನ್, ಅಲ್ಪ ಸಂಖ್ಯಾತರ ಮೋರ್ಚಾದ ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್, ರೈತ ಮೋರ್ಚಾದ ಅಧ್ಯಕ್ಷ ವಿಜಯ ಗೌಡ ವೇಣೂರು, ಎಸ್.ಸಿ ಮೋರ್ಚಾದ ಅಧ್ಯಕ್ಷ ಈಶ್ಬರ ಭೈರ, ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಆರ್, ವಿವಿಧ ಮಹಾ ಶಕ್ತಿ ಕೇಂದ್ರಗಳ ಅಧ್ಯಕ್ಷರಾಗಿರುವ ನೇಮಯ್ಯ ಕುಲಾಲ್ ನಾರಾವಿ,. ವಿಶ್ವನಾಥ ಗೊಲ್ಲ ಅಳದಂಗಡಿ, ಚಂದ್ರಕಾಂತ ಗೌಡ ಕುವೆಟ್ಟು, ಹರೀಶ್ ಕಳೆಂಜ ಧರ್ಮಸ್ಥಳ, ಯಶವಂತ ಪುದುವೆಟ್ಟು ಉಜಿರೆ, ಪ್ರಕಾಶ್ ಜೈನ್ ಲಾಯಿಲ, ರಾಜೇಶ್ ಪ್ರಭು ನಗರ, ಬಾಲಕೃಷ್ಣ ಗೌಡ ಕಣಿಯೂರು, ರೈತ ಮೋರ್ಚಾ ಜಿಲ್ಲಾಧ್ಯಕ್ಷರ ಗಣೇಶ್ ನಾವೂರು, ರಾಜ್ಯ ಅಲ್ಪ ಸಂಖ್ಯಾತರ ಮೋರ್ಚಾದ ಉಪಾಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ ಉಪಸ್ಥಿತರಿದ್ದರು.
ಸೃಜನ್ ಕಲ್ಮಂಜ ವಂದೇ ಮಾತರಂ ಹಾಡಿ, ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ರಾಜೇಶ್ ಪೆಂರ್ಬುಡ ಕಾರ್ಯಕ್ರಮ ನಿರೂಪಿಸಿದರು.