25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

ಬೆಳಾಲು: ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರಗುತ್ತಿದ್ದ ಬೇಸಿಗೆ ಶಿಬಿರದ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಶಿಬಿರದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಜೊತೆಗೆ ಅಜ್ಜಿ ಕಥಾ ಪರಂಪರೆಯ ಕುರಿತು ಅಭಿಪ್ರಾಯವನ್ನು ಹಂಚಿಕೊಂಡರು. ಈಗೀಗ ಮನೆಯಲ್ಲಿ ಅಜ್ಜಿಯರಿದ್ದರೂ ಮಕ್ಕಳಿಗೆ ಕಥೆ ಹೇಳುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!