ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಾ. 28 ರಂದು ಮತದಾನ ಜಾಗೃತಿ ಕಾರ್ಯಕ್ರಮ ಜರಗಿತು.

ಉಜಿರೆಯ ಶ್ರೀ ಧ. ಮಂ. (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗ ಹಾಗೂ ಉಜಿರೆ ಗ್ರಾ.ಪಂ.ನ ಡಿಜಿಟಲ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಡಿಜಿಟಲ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕಿ ತಾರಾ ಎಸ್. ಗೌಡ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಜನತಂತ್ರಗಳ ಚುನಾವಣೆಗಳಲ್ಲಿ ಮತದಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. ಮತದಾನ ಮಾಡಲು ಅರ್ಹ ವಯಸ್ಸು, ಮತದಾರರ ಗುರುತಿನ ಚೀಟಿ ಪಡೆಯುವ ವಿಧಾನ ಮುಂತಾದ ವಿಷಯಗಳ ಕುರಿತು ಮಾಹಿತಿ ನೀಡಿದರು.
ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಕೋಟ್ಯಾನ್ ಅವರು ವಿದ್ಯಾರ್ಥಿನಿಯರಿಗೆ ಮತದಾನ ಕುರಿತು ಪ್ರತಿಜ್ಞೆ ಬೋಧಿಸಿದರು. ಮತ ಚಲಾಯಿಸುವುದರ ಕುರಿತು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮೀಣ ಪುನರ್ವಸತಿ ಕೇಂದ್ರದ ಕಾರ್ಯಕರ್ತರಾದ ವಿಫುಲ್ ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸ್ವಾಗತಿಸಿ, ವಂದಿಸಿದರು‌. ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!