ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಎ.13 ಮೇಷ ಸಂಕ್ರಮಣದಿಂದ ಮೊದಲ್ಗೊಂಡು ಎ.23 ರವರೆಗೆ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಎ.13 ಕ್ರೋಧಿ ಸಂವತ್ಸರದ ಮೇಷ ಸಂಕ್ರಮಣದಂದು ರಾತ್ರಿ ಧ್ವಜಾರೋಹಣ, ಎ.14 ರಂದು ಸೌರಮಾನ (ವಿಷು)ಯುಗಾದಿ, ಧರ್ಮ ನೇಮ, ಎ.15 ರಂದು ಅಣ್ಣಪ್ಪ ದೈವಗಳ ನೇಮ, ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ 16 ರಂದು ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ.17 ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಎ 18 ರಂದು ಕಂಚಿಮಾರುಕಟ್ಟೆ ಉತ್ಸವ, ಎ.19 ರಂದು ಲಲಿತೋದ್ಯಾನವನ ಕಟ್ಟೆ ಉತ್ಸವ, ಎ. 2೦ರಂದು ಕೆರೆಕಟ್ಟೆ ಉತ್ಸವ, ಎ 21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ ರಥೋತ್ಸವ, ಎ. 22 ರಂದು ರಾತ್ರಿ ಶ್ರೀ ಮನ್ಮಹಾರಥೋತ್ಸವ, ಎ 23 ರಂದು ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭ್ರತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ.