25.7 C
ಪುತ್ತೂರು, ಬೆಳ್ತಂಗಡಿ
May 17, 2025
ಜಿಲ್ಲಾ ಸುದ್ದಿರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ:17- ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಏ.3ರ ಬುಧವಾರ ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮುಲ್ಲೈ ಮುಗಿಲನ್ ಎಂ.ಪಿ. ಅವರಿಗೆ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯಲ್ಲಿ ರಾರಾಜಿಸಿದ ತುಳುನಾಡ ಧ್ವಜ:
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು.

ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್, ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್,

ಮಾಜಿ ಸಚಿವ ರಮಾನಾಥ ರೈ, ಅಭಯಚಂದ್ರ, ಎಂ ಎಲ್ಸಿ‌ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಪ್ರಮುಖರು, ಕಾಯ೯ಕತ೯ರು ಭಾಗಿಯಾದರು. ವಿಶೇಷವಾಗಿ ಮೆರವಣಿಗೆಯಲ್ಲಿ ತುಳುನಾಡ ಧ್ವಜ ರಾರಾಜಿಸುತ್ತಿತ್ತು. ಕಾಂಗ್ರೆಸ್ ಧ್ವಜದೊಂದಿಗೆ ಕಾರ್ಯಕರ್ತರ ಘೋಷಣೆ ಮುಗಿಲು ಮುಟ್ಟಿತ್ತು.

Related posts

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya
error: Content is protected !!