ಬೆಳಾಲು: ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರಗುತ್ತಿದ್ದ ಬೇಸಿಗೆ ಶಿಬಿರದ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಶಿಬಿರದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಜೊತೆಗೆ ಅಜ್ಜಿ ಕಥಾ ಪರಂಪರೆಯ ಕುರಿತು ಅಭಿಪ್ರಾಯವನ್ನು ಹಂಚಿಕೊಂಡರು. ಈಗೀಗ ಮನೆಯಲ್ಲಿ ಅಜ್ಜಿಯರಿದ್ದರೂ ಮಕ್ಕಳಿಗೆ ಕಥೆ ಹೇಳುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.
ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.