28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

ಪಟ್ರಮೆ : ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ , ಪಟ್ರಮೆ ಗ್ರಾಮ ಪಂಚಾಯತ್, ಸಾರ್ವಜನಿಕ ಗ್ರಂಥಾಲಯ ಇದರ ಸಂಯೋಗದಲ್ಲಿ
ಮತದಾನ ಜಾಗೃತಿ ಕಾರ್ಯಾಗಾರ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನಡೆಯಿತು.


ಶ್ರೀರಾಮ ವಿದ್ಯಾ ಸಂಸ್ಥೆ ಪಟ್ಟೂರಿನ ಮುಖ್ಯೋಪಾಧ್ಯಯರಾದ ಚಂದ್ರಶೇಖರ್ ಶೇಟ್, ಪಟ್ರಮೆ ಗ್ರಾಮ ಪಂಚಾಯತ್ ಸಾರ್ವಜನಿಕ ಗ್ರಂಥಾಲಯ ವಿಭಾಗದ ಗ್ರಂಥ ಪಾಲಕಿಯಾದ ಶ್ರೀಮತಿ ವಿದ್ಯಾ ಸರಸ್ವತಿ ಹಾಗೂ ಶಾಲಾ ಹಂತದ ಮತದಾರ ಸಾಕ್ಷರತಾ ಸಂಘದ ಸಂಚಾಲಕರು (ELC) ಆದ ಸುಪ್ರೀತ ಎ. ಉಪಸ್ಥಿತರಿದ್ದರು.


ಕಾರ್ಯಾಗಾರದಲ್ಲಿ ಚಂದ್ರಶೇಖರ್ ಶೇಟ್ ಮಾತನಾಡಿ ಚುನಾವಣೆ ಮತದಾನ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ ಪ್ರಜ್ಞಾವಂತನಾದ ನಿಜವಾದ ದೇಶದ ಪ್ರಜೆಯು ಚುನಾವಣೆ ದಿನದಂದು ಮತದಾನ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ದೇಶದ ಪ್ರತಿ ತನ್ನ ಕರ್ತವ್ಯವನ್ನು ಪಾಲಿಸಬೇಕು ಎಂದು ತಿಳಿಸಿದರು. ಮುಂಬರುವ ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆ 2024ರಲ್ಲಿ ನಮ್ಮ ಗ್ರಾಮದ 18 ವರ್ಷ ಮೇಲ್ಪಟ್ಟ ಎಲ್ಲಾ ಮತದಾನ ಬಾಂಧವರು ಮತದಾನ ಮಾಡುವಂತೆ ಶಾಲಾ ವಿದ್ಯಾರ್ಥಿಗಳು ಪ್ರೇರೇಪಿಸಬೇಕು. 18 ವರ್ಷ ಮೇಲ್ಪಟ್ಟವರ ನಿಮ್ಮ ಮನೆಗಳಲ್ಲಿದ್ದರೆ ಅವರು ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಮತ್ತು ಆದ್ಯತೆಯ ಮೇರೆಗೆ ಮತದಾನ ಮಾಡಬೇಕು ಎಂದು ಶಾಲಾ ಮಕ್ಕಳಿಗೆ ಮಾಹಿತಿಯನ್ನು ನೀಡಿದರು. ನೆರೆಹೊರೆಯ ಮನೆಯವರು ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದರು.

ಗ್ರಂಥ ಪಾಲಕಿಯಾದ ವಿದ್ಯಾ ಸರಸ್ವತಿ ರವರು ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಇರುವ ನಮ್ಮ ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ವ್ಯವಸ್ಥೆಯು ಒಂದು ಪ್ರಮುಖವಾದ ಘಟ್ಟವಾಗಿದೆ. ಇದರ ಭಾಗವಾಗಿ ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆಯ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನ ಮಾಡಬೇಕು.. ಅದಕ್ಕಾಗಿ ನಡೆಸುತ್ತಿರುವ ಜಾಗೃತಿ ಅಭಿಯಾನದಲ್ಲಿ ನೀವೆಲ್ಲ ವಿದ್ಯಾರ್ಥಿಗಳು ಪ್ರೇರಕರಾಗಿ ಭಾಗವಹಿಸಿ ಎಂದು ತಿಳಿಸಿದರು.

Related posts

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!