April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಬೆಂಗಳೂರು – ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ನಿಂದ ಕನ್ನ ಕೊರೆದು 9 ಲಕ್ಷ ರೂ. ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಪ್ರಕರಣ ಸಂಬಂಧ ಐದು ಮಂದಿ ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್ ಗೌಡ(40ವ), ಪುದುವೆಟ್ಟು ಗ್ರಾಮದ ಮೋಹನ್ (28ವ), ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ನಿವಾಸಿ ಜಯ ಸುವರ್ಣ(39ವ),ಹಾಸನ‌ ಜಿಲ್ಲೆಯ ಬೇಲೂರು ತಾಲೂಕಿನ ಹರೆಹಳ್ಳಿಯ ನಿವಾಸಿ ದಿನೇಶ್ (40ವ), ಕಡಬ ತಾಲೂಕಿನ ಕಡಬ ಗ್ರಾಮದ ಕಾರ್ತಿಕ್(28ವ) ಬಂಧಿತ‌ ಆರೋಪಿಗಳು. ಆರೋಪಿಗಳನ್ನು ಎ.1 ರಂದು ನೆಲ್ಯಾಡಿಯಲ್ಲಿ ವಶಕ್ಕೆ ಪಡೆದು ಬೆಳ್ತಂಗಡಿ ಕೋರ್ಟ್ ಗೆ ಎ.1 ರಂದು ಸಂಜೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗಳಿಗೆ 4 ದಿನಗಳ ಪೊಲೀಸ್ ಕಸ್ಟಡಿ ನೀಡಿತ್ತು. ಪೊಲೀಸ್ ಕಸ್ಟಡಿ ಅಂತ್ಯವಾಗಿರುವುದರಿಂದ ಎ.4 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದ್ದು ಅರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣ: ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ ಮಾ.19ರ ರಾತ್ರಿಯ ಮಧ್ಯದ ಅವಧಿಯಲ್ಲಿ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಯಾರೋ ಕಳ್ಳರು ಡಿಸೇಲ್ ಪೈಪ್ ಲೈನ್ ನಲ್ಲಿ ರಂದ್ರ ಕೊರೆದು 2.5 ಇಂಚು ಹೆಚ್ ಡಿಪಿಇ ಪೈಪ್ ಮೂಲಕ ಅಂದಾಜು 12,000 ಲೀ. ಡಿಸೇಲ್ ನ್ನು ಕಳವು ಮಾಡಿದ್ದಾರೆ. ಕಳವಾದ ಡಿಸೇಲ್ ನ ಮೌಲ್ಯ ರೂ 9,60,000 ಎಂದು ಅಂದಾಜಿಸಲಾಗಿತ್ತು.

ಘಟನೆಯ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 19/2024 ಕಲಂ: 427,285, 379 ಐ ಪಿ ಸಿ ಕಲಂ 15(2) ಪೆಟ್ರೊನೆಟ್ ಕಾಯ್ದೆ ಕಲಂ 3(2) ಪ್ರಿವೆನ್ಸೆನ್ ಆಫ್ ಡ್ಯಾಮೆಜ್ ಟು ಪಬ್ಲಿಕ್ ಪ್ರಾಪರ್ಟಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿತ್ತು.*ವಶಪಡಿಸಿಕೊಂಡ ವಸ್ತುಗಳು:* ಕೃತ್ಯಕ್ಕೆ ಬಳಸಿದ 800 ಕಾರು ,100 ಲೀಟರ್ ಡೀಸೆಲ್ , ಪೈಪುಗಳು , ಡ್ರಿಲಿಂಗ್ ಮೆಷಿನ್ , ವೆಡ್ಡಿಂಗ್ ಮೆಷಿನ್, ಮೊಬೈಲ್ ಫೋನ್ ಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆ: ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ವಸಂತ ಅಚಾರ್ ನೇತೃತ್ವದ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!