September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

ನಾವರ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ 3ನೇ ದಿನದ ಧಾರ್ಮಿಕ ಸಮಾರಂಭದಲ್ಲಿ ಜೀವನದಲ್ಲಿ ನೆಮ್ಮದಿಯ ವಾತಾವರಣವನ್ನು ಪಡೆಯಲು ಶ್ರದ್ದಾ ಭಕ್ತಿಯ ಭಗವಂತನ ಆರಾಧನೆ ಮುಖ್ಯ ಎಂದು ಕನ್ಯಾಡಿ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.

ವೇದಿಕೆಯಲ್ಲಿ ಬಳಂಜ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಕೊಂಗುಲ, ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಬೆಂಗತ್ಯಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ದಯಾನಂದ ಪೂಜಾರಿ, ಸುಲ್ಕೇರಿ ಶ್ರೀ ಮಹಮ್ಮಾಯಿ ದೇವಸ್ಥಾನದ ಅಧ್ಯಕ್ಷ ವಸಂತ ಪೂಜಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಪಿನಡ್ಕ, ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಅಭಿವೃದ್ಧಿ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ಭಕ್ತಾ ಮಹಾಶಯರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಎನ್ ನಿತ್ಯಾನಂದ ನಾವರ ಸ್ವಾಗತಿಸಿದರು. ಕಾರ್ಯದರ್ಶಿ ವಿಜಯ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ಪುನೀತ್ ಕುಮಾರ್ ಪಿಲ್ಯ , ವೀರೇಂದ್ರ ಕುಮಾರ್ ಜೈನ್, ವಿಶ್ವನಾಥ್ ಬಂಗೇರ ಶಿರ್ಲಾಲು ಸಹಕರಿಸಿದರು.

ಬೆಳಿಗ್ಗೆ ಮಕ್ಕಳ ಕಲರವ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ನೃತ್ಯ ಸಂಕಲ್ಪಂ ವಿವಿಧ ಮನೋರಂಜನೆ ಕಾರ್ಯಕ್ರಮ ನಡೆಯಿತು.

Related posts

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

Suddi Udaya

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya
error: Content is protected !!