29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

ಬೆಳ್ತಂಗಡಿ: ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿ ದರ ನಿಗದಿ ಪಡಿಸುವ ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆಗೆ ಎ.4ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸಹಕಾರ ಸಂಘಗಳ ಹಣವನ್ನು ಡಿಸಿಸಿ ಬ್ಯಾಂಕ್ ಅಥವಾ ಅಪೆಕ್ಸ್‌ ಬ್ಯಾಂಕ್‌ನಲ್ಲಿ ಇಡುವಂತೆಯೂ ಸರಕಾರ ಹೊರಸಿರುವ ಸುತ್ತೋಲೆ ಕಾನೂನು ಬಾಹಿರ ಎಂದು ಹೈಕೋರ್ಟ್ ತಿಳಿಸಿದೆ. ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿ ದರ ನಿಗದಿಪಡಿಸುವ ಅಧಿಕಾರಕ್ಕೆ ರಾಜ್ಯ ಸರಕಾರ ತಡೆ ನೀಡಿ ಮತ್ತು ಸಹಕಾರ ಸಂಘಗಳು ತನ್ನ ಹಣವನ್ನು ಡಿಸಿಸಿ ಬ್ಯಾಂಕ್ ಅಥವಾ ಅಪೆಕ್ಸ್‌ ಬ್ಯಾಂಕ್‌ನಲ್ಲಿ ಇಡಬೇಕು ಎಂದು ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಬೆಳ್ತಂಗಡಿ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರ ಸಂಘ ಸಹಿತ 20ಕ್ಕೂ ಅಧಿಕ ಸಹಕಾರ ಸಂಘಗಳು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ವಾದ ಮಂಡಿಸಿದ್ದರು. ಸಹಕಾರ ಸಂಘಗಳು ಸಾಲಗಳ ಮೇಲೆ ನಿಗದಿ ಪಡಿಸುವ ಬಡ್ಡಿ ಇನ್ನಿತರ ವೆಚ್ಚಗಳು, ದರಗಳು ಹಾಗೂ ಠೇವಣಿಗಳ ಮೇಲೆ ನೀಡುವ ಬಡ್ಡಿ ಇತ್ಯಾದಿ ಅಂಶಗಳನ್ನು ನಿಗದಿಪಡಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ. ಈ ಅಧಿಕಾರ ರಿಸರ್ವ್ ಬ್ಯಾಂಕ್‌ಗೆ ಮಾತ್ರ ಇದೆ.

ಆದರೆ ರಿಸರ್ವ್ ಬ್ಯಾಂಕ್ ಈ ಬಗ್ಗೆ ಯಾವುದೇ ಆದೇಶ ಹೊರಡಿಸಿಲ್ಲ. ಸಹಕಾರ ಸಂಘಗಳ ಹಣವನ್ನು ಡಿಸಿಸಿ ಬ್ಯಾಂಕ್ ಅಥವಾ ಅಪೆಕ್ಸ್‌ ಬ್ಯಾಂಕ್‌ನಲ್ಲಿ ಇಡಬೇಕು ಎಂದು ಸರಕಾರ ಹೊರಡಿಸಿರುವ ಸುತ್ತೋಲೆ ಕೂಡ ಕಾನೂನು ಬಾಹಿರವಾಗಿದೆ. ತಮ್ಮ ವ್ಯವಹಾರಗಳನ್ನು ನಡೆಸುವ ಸಂಪೂರ್ಣ ಅಧಿಕಾರ ಆಯಾಯ ಸೊಸೈಟಿಗಳಿಗೆ ಮಾತ್ರ ಇದೆ. ಅದು ಸಹಕಾರ ಸಂಘಗಳ ಸಂವಿಧಾನ ಬದ್ಧ ಹಕ್ಕಾಗಿದೆ ಎಂದು ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ಸಹಕಾರ ಸಂಘಗಳ ಹಣವನ್ನು ಡಿಸಿಸಿ ಬ್ಯಾಂಕ್ ಅಥವಾ ಅಪೆಕ್ಸ್ ಬ್ಯಾಂಕ್‌ನಲ್ಲಿ ಇಡಬೇಕು ಎಂಬ ಆದೇಶ ಸರಿಯಾದುದಲ್ಲ. 20 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್‌ ಮುಳುಗಿದೆ ಎಂದು ನ್ಯಾಯಪೀಠದ ಗಮನ ಸೆಳೆದರು. ಇವರ ವಾದವನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರು ಸರಕಾರದ ಸುತ್ತೋಲೆಗೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದ್ದಾರೆ.

Related posts

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya
error: Content is protected !!