27.9 C
ಪುತ್ತೂರು, ಬೆಳ್ತಂಗಡಿ
March 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಪುದುವೆಟ್ಟು : ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ ರವರ ವಹಿಸಿ ಮಾತನಾಡಿ ಈ ವರ್ಷದ ಬೇಸಿಗೆ ಶಿಬಿರ ಅತ್ಯಂತ ಯಶಸ್ವಿಯಾಗಿ ಮುಗಿದಿದೆ ಶಾಲೆಯ ಎಲ್ಲಾ ಮಕ್ಕಳು ಹಾಗೂ ಶಿಕ್ಷಕ ವೃಂದದವರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ, ಬೇಸಿಗೆ ಶಿಬಿರದಲ್ಲಿ ಕಲಿತಂತಹ ವಿಷಯಗಳನ್ನು ಮಕ್ಕಳು ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.


ಸಮಾರೋಪ ಸಮಾರಂಭದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆಯ ನಿವೃತ್ತ ಶಿಕ್ಷಕಿಯಾದ ಶ್ರೀಮತಿ ವಿಜಯಲಕ್ಷ್ಮಿ ಅವರು ವಹಿಸಿ ಮಾತನಾಡಿ ಪ್ರಾಥಮಿಕ ಶಾಲೆಯ ಮಕ್ಕಳು ಮುಗ್ಧ ಮನಸ್ಸಿನ ಮಕ್ಕಳು ಈ ಮಕ್ಕಳಿಗೆ ಒಳ್ಳೆಯ ವಿಷಯವನ್ನು ನಾವು ತಿಳಿಸಿದಾಗ ಮುಂದಿನ ದಿನಗಳಲ್ಲಿ ಆ ಮಕ್ಕಳು ದೇಶಕ್ಕೆ ಉತ್ತಮ ಪ್ರಜೆಯಾಗುತ್ತಾರೆ ಎಂದು ತಿಳಿಸಿದರು.


ಮೂರನೇ ದಿನದ ಬೇಸಿಗೆ ಶಿಬಿರದಲ್ಲಿ ಶ್ರೀಮತಿ ವಿಜಯಲಕ್ಷ್ಮಿ ಅವರು ಮಕ್ಕಳಿಗೆ ಅಭಿನಯ ಗೀತೆ ಹಾಡುಗಾರಿಕೆಯ ಬಗ್ಗೆ ತರಬೇತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು. ಶ್ರೀಮತಿ ಶೀಲಾ ಯನ್ ಧನ್ಯವಾದವಿತ್ತರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಕೊಯ್ಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ 75ನೇ ವರ್ಷದ ಅಮೃತ ಮಹೋತ್ಸವದ‌ “ಅಮೃತ ಕೊಯ್ಲು” ಆಮಂತ್ರಣ

Suddi Udaya

ಮಕ್ಕಳ ಧ್ವನಿ ಕಾರ್ಯಕ್ರಮದ ಕವನ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ವಿದ್ಯಾರ್ಥಿಗಳು

Suddi Udaya
error: Content is protected !!