30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಎ.2 ರಂದು ಸಂಜೆ ನಡೆದಿದೆ

ಬೈಕ್ ಸವಾರರನ್ನು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂತರ ಪರಿಸರದ ನಿವಾಸಿಗಳಾದ ಗೌತಮ್ ಮತ್ತು ಪ್ರಜಿತ್ ಎಂದು ಗುರುತಿಸಲಾಗಿದೆ.

ಘಟನೆ ವಿವರ: ಎಪ್ರಿಲ್ 02 ರಂದು ಸಂಜೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಶಿರ್ತಾಡಿ-ಸಾವ್ಯ- ಕೊಕ್ರಾಡಿ ಸಾರ್ವಜನಿಕ ರಸ್ತೆಯಲ್ಲಿ ಪಿಕಪ್‌ ವಾಹನ ನಂಬ್ರ ಕೆಎ-19-AE-2296 ಅದರ ಚಾಲಕ ಕೊಕ್ರಾಡಿ ಕಡೆಯಿಂದ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿದ ಪರಿಣಾಮ, ಪಿಕ್ ಅಪ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ನಂಬ್ರ KA-19-EW-5312 ಸವಾರ ಪ್ರಜೀತ್ ಎಂಬವರು, ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದು, ಸವಾರ ಹಾಗೂ ಸಹಸವಾರ ಗೌತಮ್ ಬೈಕ್ ಸಮೇತವಾಗಿ ರಸ್ತೆಗೆ ಬಿದ್ದಿರುತ್ತಾರೆ.ಗಂಭೀರ ಗಾಯಗೊಂಡಿರುವ ಅವರುಗಳನ್ನು ಚಿಕಿತ್ಸೆಗಾಗಿ ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರಜಿತ್ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಗೌತಮ್ ಅವರಿಗೆ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾವರ ನಿವಾಸಿ ರಂಜಿತ್ ಅವರು ನೀಡಿದ ದೂರಿನ ಮೇರೆಗೆ ವೇಣೂರು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!