ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಮಹಿಳಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲ ಎಂ.ಕೆ ಕೆದ್ದು ಭಾಗವಹಿಸಿ ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮಾನರಂತೆ ಬದುಕುತ್ತಿದ್ದಾರೆ. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬಂದು ಸ್ವಾಭಿಮಾನ ಹಾಗೂ ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ನಿವೃತ್ತ ಶಿಕ್ಷಕಿ ಉಮಾ ಆರ್ ರಾವ್, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿರುವ ಸಂಘಟಕಿ, ಮಹಿಳಾ ಮಂಡಲಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಶಾಂತಾ ಬಂಗೇರ ಕಲಾವಿದರೂ, ಲಾಯಿಲ ಗ್ರಾಮ ಪಂಚಾಯತ್ ನ ಸದಸ್ಯೆ ಆಶಾಲತಾ ಪ್ರಶಾಂತ್, ದೆಹಲಿಯ ರಿಪಬ್ಲಿಕ್ ಡೇ ಪೆರೇಡ್ ನಲ್ಲಿ ಭಾಗವಹಿಸಿದ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ರಾಧಿಕಾ ಸಿ. ಎಸ್. ಇವರನ್ನು ಸನ್ಮಾನಿಸಲಾಯಿತು.

ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ ಸ್ವಾಗತಿಸಿ, ಮಹಿಳಾ ದಿನಾಚರಣೆಯ ಮುಖಾಂತರ ನಡೆದ ಐದು ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.

ವೇದಿಕೆ ಆಹ್ವಾನವನ್ನು ಸದಸ್ಯರಾದ ಸ್ವಾತಿ ಪ್ರೀತೇಶ್, ಸನ್ಮಾನಿತರ ಪರಿಚಯವನ್ನು ಕಾರ್ಯಕ್ರಮದ ಸಂಯೋಜಕರಾದ ಹೇಮಾವತಿ ಕೆ, ಮಧುರ ರಾಘವ್ ವಾಚಿಸಿದರು. ಕಾರ್ಯಕ್ರಮದಲ್ಲಿ ಘಟಕದ ಪೂರ್ವ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದ ದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Comment

error: Content is protected !!