23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ.

ಪುದುವೆಟ್ಟು ಗ್ರಾಮದ ಮಠ ನಿವಾಸಿ ಸನ್ನಿ ಎಂಬವರ ಪುತ್ರ, ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ಓದುತ್ತಿರುವ ಶರೋನ್ ಹಾಗೂ ಕಳೆಂಜ ಗ್ರಾಮದ ಮಾಣಿಂಗೇರಿ ನಿವಾಸಿ, ನರ್ಸಿಂಗ್ ವಿದ್ಯಾರ್ಥಿ ಸೆಬಾಸ್ಟಿಯನ್ ಅಪಘಾತವಾದ ವಿದ್ಯಾರ್ಥಿಗಳು.

ಎ.05 ರಂದು ಮುಂಜಾನೆ ಬಿ-ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಬಿ.ಸಿ.ರೋಡ್‌ ನಿಂದ ಮಂಗಳೂರು ಕಡೆ ಬೈಕಿನಲ್ಲಿ ಹೋಗುತ್ತಿರುವಾಗ ಘಟನೆ ಸಂಭವಿಸಿದೆ.

ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ, ಮಂಗಳೂರು ಯುನಿಟಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಬಂಟ್ವಾಳ ನಿವಾಸಿ ಅಬ್ದುಲ್ ಸಮದ್ ಎಂಬವರ ದೂರಿನಂತೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya
error: Content is protected !!