22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೆರಿಗೆ ಬಳಿಕ ಉಂಟಾದ ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬದ್ಯಾರು ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ರವಿ ರವರ ಪತ್ನಿ ಗಾಯತ್ರಿ (28) ಎಂಬವರು ಎರಡನೇ ಹೆರಿಗೆಗಾಗಿ ಎ 03 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಎ04 ರಂದು ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದಾಗ ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಯಿತು ಅದರೆ  ಈ ಬಗ್ಗೆ  ಯಾವುದೇ ಪೊಲೀಸ್  ದೂರು ದಾಖಲಾದ ಬಗ್ಗೆ ಮಾಹಿತಿ ಇಲ್ಲ.

ಮೃತ ಮಹಿಳೆಗೆ  3 ವರ್ಷದ ಹೆಣ್ಣು ಮಗುವೊಂದಿದ್ದು  ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಂತಾಗಿದೆ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya
error: Content is protected !!