38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ.

ಪುದುವೆಟ್ಟು ಗ್ರಾಮದ ಮಠ ನಿವಾಸಿ ಸನ್ನಿ ಎಂಬವರ ಪುತ್ರ, ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ಓದುತ್ತಿರುವ ಶರೋನ್ ಹಾಗೂ ಕಳೆಂಜ ಗ್ರಾಮದ ಮಾಣಿಂಗೇರಿ ನಿವಾಸಿ, ನರ್ಸಿಂಗ್ ವಿದ್ಯಾರ್ಥಿ ಸೆಬಾಸ್ಟಿಯನ್ ಅಪಘಾತವಾದ ವಿದ್ಯಾರ್ಥಿಗಳು.

ಎ.05 ರಂದು ಮುಂಜಾನೆ ಬಿ-ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಬಿ.ಸಿ.ರೋಡ್‌ ನಿಂದ ಮಂಗಳೂರು ಕಡೆ ಬೈಕಿನಲ್ಲಿ ಹೋಗುತ್ತಿರುವಾಗ ಘಟನೆ ಸಂಭವಿಸಿದೆ.

ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ, ಮಂಗಳೂರು ಯುನಿಟಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಬಂಟ್ವಾಳ ನಿವಾಸಿ ಅಬ್ದುಲ್ ಸಮದ್ ಎಂಬವರ ದೂರಿನಂತೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!