24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

ಕೊರಿಂಜ : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವನ್ನು ವಿಜಯ ಕುಮಾರ್ ತಂತ್ರಿಗಳು ದೀಪ ಪ್ರಜ್ವಲನೆ ಮಾಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಬಾನಡ್ಕ ಹಾಗೂ ಸುರೇಶ್ ನಾಯ್ಕ ಹಲೇಜಿ, ಪ್ರಗತಿ ಬಂಧು ಒಕ್ಕೂಟದ ಕಣಿಯೂರು ವಲಯದ ವಲಯಾಧ್ಯಕ್ಷ ರಾಜ್ ರಮಾನಂದ ಪೂಜಾರಿ ಮೊಗೆರೋಡಿ, ದೇವಸ್ಥಾನದ ಅರ್ಚಕರಾದ ಕಾರ್ತಿಕ್ ಭಟ್ ಹಾಗೂ ಗೋವಿಂದ ಭಟ್ ಮತ್ತು ಸಹ‌ ಮೊಕ್ತೇಸರರಾದ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.

ಸಹ ಮೊಕ್ತೇಸರರಾದ ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿ ಧನ್ಯವಾದವಿತ್ತರು. ನಂತರ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಇವರ ಭಜನಾ ಕಾರ್ಯಕ್ರಮದೊಂದಿಗೆ ಭಜನಾ ಕಾರ್ಯಕ್ರಮವನ್ನು ಮಾಡಲಾಯಿತು.

Related posts

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!