23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಬೇಸಿಗೆ ಶಿಬಿರವು ಸಮಾರೋಪಗೊಂಡಿತು. ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಮಾರೋಪ ದಿನದ ಶಿಬಿರದಲ್ಲಿ ಕಥೆ, ಕವನ ಮತ್ತು ವರದಿಗಾರಿಕೆ ಬಗ್ಗೆ ಬರವಣಿಗೆ ಕಮ್ಮಟ ಹಾಗೂ ಮಿಮಿಕ್ರಿ, ಜಾನಪದ ಗೀತೆಗಳ ಗಾಯನ ಪ್ರಾತ್ಯಕ್ಷಿಕೆ, ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ಪೂಜ, ಪೂರ್ಣಶ್ರೀ, ಲಿಖಿತ ಮತ್ತು ಪ್ರಸಾದ್ ಶೆಟ್ಟಿ ಮುಂಡಾಜೆ ಇವರು ಆಗಮಿಸಿದ್ದರು.

ವೇದಿಕೆಯಲ್ಲಿ ಶಿಕ್ಷಕರಾದ ಕೃಷ್ಣಾನಂದ, ಸುಮನ್ ಯು ಎಸ್, ಶ್ರೀಮತಿ ಕೋಕಿಲ ಮತ್ತು ಶ್ರೀಮತಿ ಚಿತ್ರಾ ರವರು ಉಪಸ್ಥಿತರಿದ್ದರು.
ಮಕ್ಕಳಿಂದಲೆ ಕಾರ್ಯಕ್ರಮವು ಪೂರ್ಣವಾಗಿ ಸಂಯೋಜಿಸಲ್ಪಟ್ಟಿತು.

Related posts

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya
error: Content is protected !!