March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಪುದುವೆಟ್ಟು :ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆಯನ್ನು ಎ.6 ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿ ಪೋಷಕರು ಮನೆಯಲ್ಲಿ ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳಬೇಕು, ರಜೆಯಲ್ಲಿ ಮಕ್ಕಳು ಮನೆಯಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ತಿಳಿಸಿಕೊಟ್ಟರು.

ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಮಾತನಾಡಿ ಈ ವರ್ಷ ಶಾಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಈ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ರಜೆಯ ದಿನಗಳಲ್ಲಿ ಅನುಭವಿಸಬೇಕು ಎಂದು ತಿಳಿಸಿಕೊಟ್ಟರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕ ಬಂಧುಗಳು ಆಗಮಿಸಿ ಶಾಲೆಯ ಶೈಕ್ಷಣಿಕ ಪ್ರಗತಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.

ಆಗಮಿಸಿದ ಪೋಷಕ ಬಂಧುಗಳನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಸ್ವಾಗತಿಸಿ, ಕಾರ್ಯಕ್ರಮವನ್ನು ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿಯವರು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya
error: Content is protected !!