29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

ಬೆಳ್ತಂಗಡಿ: ಸಂಘದ ಸದಸ್ಯರಾದ ಅಚ್ಚಿನಡ್ಕ ವೀರಮ್ಮನವರು ಬೆಳ್ತಂಗಡಿಯಲ್ಲಿ ಕೆಲ್ಲಗುತ್ತು ಪರಿಸರದಲ್ಲಿ ಉದಾರ ಕೊಡುಗೆಯಾಗಿ ನೀಡಿದ ಹತ್ತು ಸೆಂಟ್ಸ್ ನಿವೇಶನದಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.


ಅವರು ಎ.6ರಂದು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಭಾಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಪ್ರಕಟಿಸಿದರು.


ಸಂಘದ ಹಿರಿಯ ಸದಸ್ಯರುಗಳಾದ ಎಂ.ಕೆ. ಆರಿಗ, ಮಹಾಬಲ ಹೆಗ್ಡೆ, ಲಲಿತ, ಬಾಬುಗೌಡ, ಆಗ್ನೇಸ್ ಡೇಸಾ, ದೇವಪ್ಪ ಗೌಡ, ಪ್ರೊ. ಕೆ. ವಿಷ್ಣುಮೂರ್ತಿ ಭಟ್, ವಿಕ್ಟರ್ ಮೊರಾಸ್, ನಿವೃತ್ತ ಉಪನ್ಯಾಸ ಸುಬ್ರಹ್ಮಣ್ಯ ಮಧ್ಯಸ್ತ, ಸೋಮನಾಥ ಮಯ್ಯ ಅಳದಂಗಡಿ, ಜುಲಿಯಾನಾ ಲೋಬೊ, ಪ್ರೊ. ಉದಯಕುಮಾರ ಮಲ್ಲ, ಬೆಳ್ತಂಗಡಿ, ಬಾಬು ಪೂಜಾರಿ ಕೆದ್ದು, ರಾಮ ಕಾರಂತ, ಉಜಿರೆ, ಬಾಬು ಗೌಡ, ಮುಂಡಾಜೆ ಮೊದಲಾದರನ್ನು ಗೌರವಿಸಲಾಯಿತು.


ಇತ್ತೀಚೆಗೆ ನಿಧನರಾದ ಪ್ರೊ. ನಾ’ ವುಜಿರೆ ಅವರಿಗೆ ಆರ್.ಯನ್. ಪೂವಣಿ ಹಾಗೂ ನಿವೃತ್ತ ಶಿಕ್ಷಕ ಜಯರಾಜ ಕಾಡ, ಕುತ್ಲೂರು ಅವರಿಗೆ ವಸಂತರಾವ್ ನುಡಿನಮನ ಸಲ್ಲಿಸಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಮತ್ತು ಉಪಾಧ್ಯಕ್ಷರಾದ ಕುಸುಮಾವತಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ಪದ್ಮಕುಮರ್ ವರದಿ ಸಾದರಪಡಿಸಿದರು. ಸಂಘದ  ಉಪಾಧ್ಯಕ್ಷ ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಪದ್ಮಕುಮಾರ್ ಧನ್ಯವಾದವಿತ್ತರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!