ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ತಾಲೂಕು ಲೋಕಸಭಾ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಶೇಖರ್ ಕುಕ್ಕೇಡಿ ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ,ಕುವೆಟ್ಟು ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ಶ್ರೀನಿವಾಸ ಕಿಣಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ , ಬ್ಲಾಕ್ ಕಾಂಗ್ರೆಸ್ ನಗರ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ವಂದಾನ ಭಂಡಾರಿ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಗ್ರಾಮ ಪಂಚಾಯತ್ ಉಸ್ತುವಾರಿ ಅರವಿಂದ ಜೈನ್. ಕುವೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ಅನೂಪ್ ಬಂಗೇರ, ಕುವೆಟ್ಟು ಮತ್ತು ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.