24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

ಮರೋಡಿ: ಪರಸ್ಪರ ಸಹೋದರತೆ, ಸೌಹಾರ್ದತೆ, ವಿಶ್ವಾಸ, ನಂಬಿಕೆ ಮತ್ತು ಮೌಲ್ಯಯುತ ಜೀವನ ನಮ್ಮದಾದರೆ ರಾಮರಾಜ್ಯ ನಿರ್ಮಾಣ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶ್ರದ್ಧಾಕೇಂದ್ರಗಳ ಕೊಡುಗೆ ಅಪಾರವಾದುದು ಎಂದು ಕನ್ಯಾಡಿ ನಿತ್ಯಾನಂದನಗರ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನುಡಿದರು.

ಆಲಡೆ ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಭಾನುವಾರ ಆರಂಭಗೊಂಡಿದ್ದು, ಮೊದಲ ದಿನದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಸಮಾಜದಲ್ಲಿ ಉದಾತ್ತವಾದ ಸಂಬಂಧಗಳನ್ನು ಬೆಳೆಸುವ ನಿಟ್ಟಿನಲ್ಲಿ ದೈವಸ್ಥಾನ ಮತ್ತು ದೇವಸ್ಥಾನಗಳ ಪಾತ್ರ ದೊಡ್ಡದಿದೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಿಂದ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ಸಾಧ್ಯವಾಗುತ್ತದೆ. ಗ್ರಾಮದ ದೇವಸ್ಥಾನದ ಬ್ರಹ್ಮಕಲಶದಿಂದ ಊರಿಗೆ ಸುಭಿಕ್ಷೆಯಾಗುತ್ತದೆ ಎಂದು ಹೇಳಿದರು.

ಮರೋಡಿ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅಧ್ಯಕ್ಷತೆ ವಹಿಸಿ, 850 ವರ್ಷಗಳ ಇತಿಹಾಸವಿರುವ ಈ ಕ್ಷೇತ್ರ ಹಲವು ವರ್ಷಗಳ ಹಿಂದೆ ಪಾಳುಬಿದ್ದಿತ್ತು. ಆಲಡೆ ಸಂಬಂಧವನ್ನು ಹೊಂದಿರುವ ಕ್ಷೇತ್ರವನ್ನು 12 ವರ್ಷಗಳ ಹಿಂದೆ ಊರ ಪರವೂರ ಭಕ್ತರ ಸಹಕಾರದಿಂದ ಜೀರ್ಣೋದ್ಧಾರ ಮಾಡಿ, ಬ್ರಹ್ಮಕಲಶೋತ್ಸವ ನೆರವೇರಿಸಲಾಗಿತ್ತು. ನಂತರದಲ್ಲಿ ಹತ್ತುಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿತ್ತು. ಇದೀಗ ದೈವಸಂಕಲ್ಪದಂತೆ ಮತ್ತೆ ಬ್ರಹ್ಮಕಲಶೋತ್ಸವ ನಡೆಯುತ್ತಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಮಾತನಾಡಿ, ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಎರಡು ಆಲಡೆ ಕ್ಷೇತ್ರಗಳಲ್ಲಿ ಮರೋಡಿಯೂ ಒಂದಾಗಿದೆ ಎಂದರು.

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶಿವಪ್ರಸಾದ್‌ ಅಜಿಲ, ಹಿರ್ಗಾನ ವರ್ಧಮಾನ ಇಂಡಸ್ಟ್ರೀಸ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಪ್ರವೀಣ್‌ ಹೆಗ್ಡೆ, ಹೊಸ್ಮಾರು ವಿಜಯ ಕ್ಲಿನಿಕ್‌ನ ಡಾ.ಪ್ರಸಾದ್‌, ಶಿರ್ತಾಡಿ ಪ್ರಭಾ ಕ್ಲಿನಿಕ್‌ನ ಡಾ.ಆಶೀರ್ವಾದ್‌, ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಬೆಳ್ತಂಗಡಿಯ ವಕೀಲ ಅನಿಲ್‌ ಕುಮಾರ್ ಯು. ಶುಭಹಾರೈಸಿದರು.

ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್‌ ಪ್ರಸ್ತಾವಣೆಯೊಂದಿಗೆ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಶೋಧರ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ರತ್ನಾಕರ ಬುಣ್ಣಾನ್‌ ವಂದಿಸಿದರು.

Related posts

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!