23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

ಪೋಟೋ ಚಾರ್ಮಾಡಿ: ಹಾಡುಹಗಲೇ ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಒಂಟಿ ಸಲಗ ಓಡಾಟ ನಡೆಸಿರುವುದು ಎ.8 ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡು ಬಂದಿದ್ದು, ವಾಹನ ಚಾಲಕರಲ್ಲಿ ಆತಂಕ ಸೃಷ್ಟಿಸಿತು.

ಕಳೆದ ಸುಮಾರು ಎರಡು ತಿಂಗಳ ಹಿಂದೆಯೂ ಕಾಡಾನೆ ನಾಲ್ಕಾರು ಬಾರಿ ಘಾಟಿ ಪರಿಸರದಲ್ಲಿ ಹಗಲಲ್ಲೆ ಸಂಚರಿಸಿತ್ತು. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ. ಪಾರಾದ ಬೈಕ್ ಸವಾರ:ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು.ಆದರೆ ರಸ್ತೆಯ ಒಂದು ಬದಿಯಲ್ಲಿ ವಾಹನಗಳಿಲ್ಲದ ಕಾರಣ ಆನೆ ಇರುವುದನ್ನು ತಿಳಿಯದ ಬೈಕ್ ಸವಾರರೊಬ್ಬ ಆನೆ ದಾಟುತ್ತಿರುವ ಸಮಯದಲ್ಲೇ ಸಂಚರಿಸಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಉಳಿದ ವಾಹನ ಸವಾರರು ಆನೆ ಇರುವುದರ ಬಗ್ಗೆ ಆತನ ಗಮನಕ್ಕೆ ತಂದರೂ, ಅದನ್ನು ಲೆಕ್ಕಿಸದೆ ಆತ ಸಂಚಾರ ನಡೆಸಿದ್ದಾನೆ.

ಈ ದೃಶ್ಯವನ್ನು ಪ್ರಯಾಣಿಕರು ವಿಡಿಯೋ ಚಿತ್ರೀಕರಣ ಮಾಡಿದ್ದು,ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಾರ್ಮಾಡಿ ಕಡೆಗೆ ಬಂದ ಆನೆ: ಶನಿವಾರ ರಾತ್ರಿ ಕಾಡಾನೆ ಕಲ್ಮಂಜದ ತೋಟವೊಂದರಲ್ಲಿ ದಾಂಧಲೆ ನಡೆಸಿದ್ದು ಬಳಿಕ ಭಾನುವಾರ ರಾತ್ರಿ ಚಾರ್ಮಾಡಿ ಬಳಿ ಕಂಡುಬಂದಿದ್ದು ಸ್ಥಳೀಯರು ಹಾಗು ಇಲಾಖೆಯವರು ಸೇರಿ ಆನೆಯನ್ನು ಕಾಡಿಗಟ್ಟಿದ್ದರು. ಈ ಸಮಯ ಅದು ನೆರಿಯ ಕಾಡಿನ ಓಡಿತ್ತು. ಅದರ ಬಳಿಕ ಸೋಮವಾರ ನೆರಿಯದ ಬಾಂಜಾರು ಮಲೆ ಮೂಲಕ ಚಾರ್ಮಾಡಿ ಘಾಟಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಲ್ಮಂಜದಲ್ಲಿ ದಾಂಧಲೆ ನಡೆಸಿದ ಆನೆ ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯಕ್ಷವಾಗಿರುವ ಅನುಮಾನಗಳು ಮೂಡಿವೆ.

ಪ್ರಸ್ತುತ ಕಾಡಿನ ಕೆರೆಗಳು, ನೇತ್ರಾವತಿ ನದಿ ಸಂಪೂರ್ಣ ಬತ್ತಿ ಹೋಗಿದ್ದು, ಕೇವಲ ಮೃತ್ಯುಂಜಯ ನದಿಯಲ್ಲಿ ಮಾತ್ರ ನೀರು ಹರಿಯುತ್ತಿದ್ದು, ಈ ನದಿ ಹರಿಯುವ ನೆರಿಯ,ಚಾರ್ಮಾಡಿ ಈ ಭಾಗದಲ್ಲಿ ಕಾಡಾನೆ ಆಶ್ರಯ ಪಡೆದಿರುವ ಸಾಧ್ಯತೆ ಇದೆ.

Related posts

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya
error: Content is protected !!