September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

ಪೋಟೋ ಚಾರ್ಮಾಡಿ: ಹಾಡುಹಗಲೇ ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಒಂಟಿ ಸಲಗ ಓಡಾಟ ನಡೆಸಿರುವುದು ಎ.8 ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡು ಬಂದಿದ್ದು, ವಾಹನ ಚಾಲಕರಲ್ಲಿ ಆತಂಕ ಸೃಷ್ಟಿಸಿತು.

ಕಳೆದ ಸುಮಾರು ಎರಡು ತಿಂಗಳ ಹಿಂದೆಯೂ ಕಾಡಾನೆ ನಾಲ್ಕಾರು ಬಾರಿ ಘಾಟಿ ಪರಿಸರದಲ್ಲಿ ಹಗಲಲ್ಲೆ ಸಂಚರಿಸಿತ್ತು. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ. ಪಾರಾದ ಬೈಕ್ ಸವಾರ:ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು.ಆದರೆ ರಸ್ತೆಯ ಒಂದು ಬದಿಯಲ್ಲಿ ವಾಹನಗಳಿಲ್ಲದ ಕಾರಣ ಆನೆ ಇರುವುದನ್ನು ತಿಳಿಯದ ಬೈಕ್ ಸವಾರರೊಬ್ಬ ಆನೆ ದಾಟುತ್ತಿರುವ ಸಮಯದಲ್ಲೇ ಸಂಚರಿಸಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಉಳಿದ ವಾಹನ ಸವಾರರು ಆನೆ ಇರುವುದರ ಬಗ್ಗೆ ಆತನ ಗಮನಕ್ಕೆ ತಂದರೂ, ಅದನ್ನು ಲೆಕ್ಕಿಸದೆ ಆತ ಸಂಚಾರ ನಡೆಸಿದ್ದಾನೆ.

ಈ ದೃಶ್ಯವನ್ನು ಪ್ರಯಾಣಿಕರು ವಿಡಿಯೋ ಚಿತ್ರೀಕರಣ ಮಾಡಿದ್ದು,ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಾರ್ಮಾಡಿ ಕಡೆಗೆ ಬಂದ ಆನೆ: ಶನಿವಾರ ರಾತ್ರಿ ಕಾಡಾನೆ ಕಲ್ಮಂಜದ ತೋಟವೊಂದರಲ್ಲಿ ದಾಂಧಲೆ ನಡೆಸಿದ್ದು ಬಳಿಕ ಭಾನುವಾರ ರಾತ್ರಿ ಚಾರ್ಮಾಡಿ ಬಳಿ ಕಂಡುಬಂದಿದ್ದು ಸ್ಥಳೀಯರು ಹಾಗು ಇಲಾಖೆಯವರು ಸೇರಿ ಆನೆಯನ್ನು ಕಾಡಿಗಟ್ಟಿದ್ದರು. ಈ ಸಮಯ ಅದು ನೆರಿಯ ಕಾಡಿನ ಓಡಿತ್ತು. ಅದರ ಬಳಿಕ ಸೋಮವಾರ ನೆರಿಯದ ಬಾಂಜಾರು ಮಲೆ ಮೂಲಕ ಚಾರ್ಮಾಡಿ ಘಾಟಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಲ್ಮಂಜದಲ್ಲಿ ದಾಂಧಲೆ ನಡೆಸಿದ ಆನೆ ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯಕ್ಷವಾಗಿರುವ ಅನುಮಾನಗಳು ಮೂಡಿವೆ.

ಪ್ರಸ್ತುತ ಕಾಡಿನ ಕೆರೆಗಳು, ನೇತ್ರಾವತಿ ನದಿ ಸಂಪೂರ್ಣ ಬತ್ತಿ ಹೋಗಿದ್ದು, ಕೇವಲ ಮೃತ್ಯುಂಜಯ ನದಿಯಲ್ಲಿ ಮಾತ್ರ ನೀರು ಹರಿಯುತ್ತಿದ್ದು, ಈ ನದಿ ಹರಿಯುವ ನೆರಿಯ,ಚಾರ್ಮಾಡಿ ಈ ಭಾಗದಲ್ಲಿ ಕಾಡಾನೆ ಆಶ್ರಯ ಪಡೆದಿರುವ ಸಾಧ್ಯತೆ ಇದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya
error: Content is protected !!