April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ಬೈಲಿನಲ್ಲಿ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ವಾಹನ ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪ ನಿರೀಕ್ಷಕರಾದ ಮುರಳೀಧರ್ ಕೆ.ಜಿ ಅವರು ಹಾಗೂ ತಂಡ ದಾಳಿ ನಡೆಸಿದ್ದು ಈ ವೇಳೆ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಎಂಬವರು ಅಕ್ರಮವಾಗಿ ಮರಳು ಕಳ್ಳತನ ಮಾಡಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು ಪಿಕಪ್ ವಾಹನವನ್ನು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
error: Content is protected !!