April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

ಕನ್ಯಾಡಿ: ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ದಕ್ಷಿಣದ ಅಯೋಧ್ಯೆ ಎಂದೆನಿಸಿದ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವವು ಎ.10 ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ.

ಇಂದು ಬೆಳಿಗ್ಗೆ ವಾರ್ಷಿಕ ಪ್ರತಿಷ್ಠಾ ಮಹೋತ್ಸವದ ವೈದಿಕ ಕಾರ್ಯಕ್ರಮಗಳು ನಡೆಯಿತು .ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀರಾಮನಾಮ ಸಪ್ತಾಹದ ಅಖಂಡ ನಂದಾದೀಪವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಎಸಿ ರಾಜು ಬೆಂಗಳೂರು,
ಸಾರಿಗೆ ಅಧಿಕಾರಿ ಚರಣ್ ಕುಮಾರ್ ಕುರ್ತೋಡಿ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಯಂತ್ ಕೋಟ್ಯಾನ್, ನಿವೃತ ಬಿಎಸ್ಎನ್ ಎಲ್ ಅಧಿಕಾರಿ ಅಣ್ಣಿ ಪೂಜಾರಿ, ಉದ್ಯಮಿ ರವಿ ಪೂಜಾರಿ‌ ಆರ್ಲ,ಪ್ರಮುಖರಾದ ಕೃಷ್ಣಪ್ಪ ಪೂಜಾರಿ,ಪ್ರಶಾಂತ್ ಎಂ ಪಾರೆಂಕಿ, ಸುನೀಲ್ ಕನ್ಯಾಡಿ, ಸಚಿನ್ ಗೌಡ ಕಲ್ಮಂಜ, ಸುಜಾತ ಅಣ್ಣಿ ಪೂಜಾರಿ,ತುಕರಾಮ್ ಪೂಜಾರಿ, ಪುರುಷೋತ್ತಮ ಪೂಜಾರಿ,ಸುಂದರ ಹೆಗ್ಡೆ ವೇಣೂರು, ವಿನಿತ್ ಕೋಟ್ಯಾನ್,ಹರೀಶ್ ಸುವರ್ಣ ಕನ್ಯಾಡಿ, ಓಬು ಪೂಜಾರಿ ಉಡುಪಿ,ಅನಂತ್ ರಾಮ್ ರಾವ್ ಚಾರ್ಮಾಡಿ, ಕೃಷ್ಣಪ್ಪ ಗುಡಿಗಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!