ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲಾಯಿಲ ಗ್ರಾಮದ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ ಲಾಯಿಲ ಸಂಗಮ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಜೊತೆಗೆ ಕೇಂದ್ರದ ಬಿಜೆಪಿ ಆಡಳಿತದ 10 ವರ್ಷಗಳ ವೈಫಲ್ಯಗಳನ್ನು ಜನತೆಗೆ ಮನದಟ್ಟು ಮಾಡುವ ಮೂಲಕ ಈ ಚುನಾವಣೆಯನ್ನು ಎದುರಿಸಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಬೆಳ್ತಂಗಡಿ ಶಾಸಕರು ಕಳೆದ ಒಂದು ವರ್ಷದಿಂದ ವನವಾಸ ಅನುಭವಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಅನಗತ್ಯ ಅಪಪ್ರಚಾರ ಮಾಡಿ ಜನರನ್ನು ವಂಚಿಸುತ್ತಿದ್ದಾರೆ. ಇತ್ತೀಚೆಗೆ ಬಿಜೆಪಿ ಪಕ್ಷದ ಸಭೆಗಳಲ್ಲಿ ನನ್ನ ಹೆಸರನ್ನು ಅನಗತ್ಯವಾಗಿ ಎಳೆದು ತರುವ ಮೂಲಕ ಕಾಂಗ್ರೆಸ್ ಪಕ್ಷದ ಪರವಾಗಿ ಶಾಸಕ ಹರೀಶ್ ಪೂಂಜಾ ಪ್ರಚಾರ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ನ , ಗ್ರಾಮೀಣ ಸಮಿತಿಯ ಕೆ.ಎಮ್ ನಾಗೇಶ್ ಕುಮಾರ್ ಗೌಡ , ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್,ಪ್ರಚಾರ ಸಮಿತಿಯ ಉಸ್ತುವಾರಿ ಶೇಖರ್ ಕುಕ್ಕೆಡಿ , ಜಿಲ್ಲಾ ಉಸ್ತುವಾರಿಗಳಾದ ನಾರಾಯಣ ಗೌಡ ದೇವಸ್ಯ , ಕಾಂಗ್ರೆಸ್ ಗ್ರಾಮೀಣ ಎಸ್ ಸಿ ಘಟಕದ
ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರು, ತಾಲೂಕು ಪಂಚಾಯತ್ ಉಸ್ತುವಾರಿ ಮಹಮ್ಮದ್ ಹನೀಪ್ ಉಜಿರೆ , ಗ್ರಾಮ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಪೂಜಾರಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರೇವತಿ , ಮಹಿಳಾ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸೌಮ್ಯ ಪುದ್ದೊಟ್ಟು ಹಾಗೂ ಬೂತ್ ಸಮಿತಿಯ ಅಧ್ಯಕ್ಷರು , ಪದಾಧಿಕಾರಿಗಳು ಉಪಸ್ಥಿತರಿದ್ದರು.