38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

ಧರ್ಮಸ್ಥಳ: ಕನ್ಯಾಡಿ‌ ಶ್ರೀರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 64 ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಭಾಗವಹಿಸಿದರು.

ಕಳೆದ 24 ವರ್ಷಗಳಿಂದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಭಾಗವಹಿಸುತ್ತಿದೆ.

ನಾಡಿನ ಪ್ರಸಿದ್ದ ಕುಣಿತಾ ಭಜನಾ ತಂಡವಾದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಕುಣಿತಾ ಭಜನೆ ನಡೆಯಿತು. ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕುಣಿತಾ ಭಜನೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಆಧ್ಯಾತ್ಮಿಕ ಜೀವನದ ಬಗ್ಗೆ ಎಲ್ಲಾ ಮಕ್ಕಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ,ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ, ಅಧ್ಯಕ್ಷೆ ಜ್ಯೋತಿ ಪೂಜಾರಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!