24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಕಳೆದ 42 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೇಸ್ ನಾಯಕ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯರಾಗಿರುವ ಜಿನ್ನಪ್ಪ ಪೂಜಾರಿ ಕಾಪಿನಡ್ಕರವರು ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಹಾಗೂ ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿಯನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾದರು ಎಂದು ಭಾರತೀಯ ಜನತಾ ಪಾರ್ಟಿಯ ಮುಖಂಡರು ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಜಿನ್ನಪ್ಪ ಪೂಜಾರಿಯವರಿಗೆ ಪಕ್ಷದ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಬಳಂಜ ಗ್ರಾ.ಪಂ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೇಮಂತ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya
error: Content is protected !!