September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಕಳೆದ 42 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೇಸ್ ನಾಯಕ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯರಾಗಿರುವ ಜಿನ್ನಪ್ಪ ಪೂಜಾರಿ ಕಾಪಿನಡ್ಕರವರು ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಹಾಗೂ ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿಯನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾದರು ಎಂದು ಭಾರತೀಯ ಜನತಾ ಪಾರ್ಟಿಯ ಮುಖಂಡರು ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಜಿನ್ನಪ್ಪ ಪೂಜಾರಿಯವರಿಗೆ ಪಕ್ಷದ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಬಳಂಜ ಗ್ರಾ.ಪಂ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೇಮಂತ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!