39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

ಬೆಳ್ತಂಗಡಿ : ಶರಾಬು ಕುಡಿಯಲು ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಚ್ಚಿನದಲ್ಲಿ ಹೊಡೆದಾಟ ಹಲ್ಲೆ ಮತ್ತು ಬೆದರಿಕೆ ಹಾಕಿದ ಘಟನೆ ನಡೆದಿದ್ದು ಆರೋಪಕ್ಕೆ ಸಂಬಂಧಿಸಿ ವ್ಯಕ್ತಿ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೆ ಆರೋಪ ಹೊತ್ತ ವ್ಯಕ್ತಿಯೂ ದೂರುದಾರರ ವಿರುದ್ಧ ಪ್ರತಿದೂರು ನೀಡಿದ ಘಟನೆ ನಡೆದಿದೆ.

ಮಚ್ಚಿನ ನಿವಾಸಿ ಪ್ರತಿಭಾ ಬಿ ರೈ (44) ಎಂಬವರ ದೂರಿನಂತೆ, ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಸದ್ಗುರು ಹೋಟೆಲಿನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡಿಕೊಂಡಿದ್ದಾಗ, ಆರೋಪಿ ಕೇಶವ ಪೂಜಾರಿ ಎಂಬಾತನು ಹೋಟೆಲಿನ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು, ದೂರುದಾರರ ಹೋಟೆಲಿನಲ್ಲಿ ಕೆಲಸ ಮಾಡುವ ಚಂದ್ರ ಎಂಬವರನ್ನು ಉದ್ದೇಶಿಸಿ, ತನ್ನೊಂದಿಗೆ ಶರಾಬು ಕುಡಿಯಲು ಕರೆದಿರುತ್ತಾನೆ. ಇದಕ್ಕೆ ಆಕ್ಷೇಪಿಸಿದಾಗ, ಆರೋಪಿಯು ಅವಾಚ್ಯ ಶಬ್ದದಿಂದ ಬೈದಿದ್ದಾನೆ. ಈ ಸಂದರ್ಭ ಮಗ ಹೃತಿಕ್ ರೈ ಕೇಶವ ಪೂಜಾರಿ ಬಳಿ ಹೋಗಿ ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಬೈಯ್ಯ ಬಾರದೆಂದು ತಿಳಿ ಹೇಳಿ ಮನವೊಲಿಸಲು ಮುಂದಾಗಿದ್ದು ಈ ಸಂದರ್ಭ ಹೃತಿಕ್ ಮೇಲೆ ಕೇಶವ ಪೂಜಾರಿ ಹಲ್ಲೆ ನಡೆಸಿರುತ್ತಾನೆ. ಇದೇ ವೇಳೆ ಗಲಾಟೆ ಬಿಡಿಸಲು ಬಂದ ಹೋಟೆಲಿನ ಕೆಲಸದಾಳು ಚಂದ್ರ ಎಂಬವರಿಗೆ ಕೂಡ ಆತ ಕೈಯಿಂದ ಹಲ್ಲೆಗೈದು ಜೀವ ಬೆದರಿಕೆ ಹಾಕಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶವ ಪೂಜಾರಿ ರವರು ಹೃತಿಕ್ ರೈ ಹಾಗೂ ಚಂದ್ರರವರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರತಿದೂರನ್ನು ನೀಡಿದ್ದು, ಈ ಎರಡೂ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ..

Related posts

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya
error: Content is protected !!