38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿಯನ್ನು ಎ. 14 ರಂದು ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಕ್ಕಡದ ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಹೆಚ್. ಪ್ರಭಾಕರ ನಾಯ್ಕ್ ಮಾತನಾಡುತ್ತಾ ಭಾರತದ ಸಂವಿಧಾನದ ಶಿಲ್ಪಿ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಇಡೀ ಬದುಕನ್ನು ಹೋರಾಟದ ಮೂಲಕ ಕಟ್ಟಿಕೊಂಡವರು. ಸಮಾಜದ ಖಿನ್ನತೆಗೆ ಒಳಗಾದ ವರ್ಗಗಳ ಉನ್ನತಿಗಾಗಿ ವಿವಿಧ ಸಾಮಾಜಿಕ ಚಳುವಳಿಗಳನ್ನು ಮುನ್ನಡೆಸಿದವರು. ಸಾಂವಿಧಾನಿಕ ಕಾನೂನು ಮತ್ತು ಆರ್ಥಿಕ ಅಭಿವೃದ್ಧಿಯ ಕುರಿತಾದ ತಮ್ಮ ಪಾಂಡಿತ್ಯಪೂರ್ಣ ಕೃತಿಗಳ ಮೂಲಕ ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ ಹಾಗಾಗಿ ನೀವೆಲ್ಲರು ವಿದ್ಯಾವಂತರಾಗಿ, ಸಂಘಟಿತರಾಗಿ, ದೇಶದ ಒಳಿತಿಗಾಗಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ.ಎ ವಹಿಸಿ ಡಾ. ಬಿ.ಆರ್. ಅಂಬೇಡ್ಕರ್ ವಿಶ್ವಜ್ಞಾನಿ, ಧೀಮಂತ ನಾಯಕ, ಶಿಕ್ಷಣ ತಜ್ಞ ಹಾಗೂ ನ್ಯಾಯಶಾಸ್ತ್ರಜ್ಞರು ಮಾತ್ರವಲ್ಲದೆ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅನಿಷ್ಠಗಳ ವಿರುದ್ಧ ಹೋರಾಡಿ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದು ಹೇಳಿದರು.

ಉಪನ್ಯಾಸಕರಾದ ಮಂಜು ಆರ್ ಅನುಷಾ ಡಿ.ಜೆ. ಹಾಗೂ ಸಿಬ್ಬಂದಿ ವರ್ಗದವರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಪ್ರಶಿಕ್ಷಣಾರ್ಥಿಗಳಾದ ಆರತಿ ಪ್ರಾರ್ಥಿಸಿ. ಸಾಮು ಸ್ವಾಗತಿಸಿ. ಶಹನಾಜ್ಹ್ ವಂದಿಸಿ, ಯಶಸ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya
error: Content is protected !!